Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಹುಲ್ ಗಾಂಧಿ ಭೇಟಿ ಮಾಡಿದ್ದೇಕೆ ಸಿದ್ದರಾಮಯ್ಯ..? ಸಂಪುಟ ಸರ್ಜರಿಯಾಗುತ್ತಾ..?

---Advertisement---

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಬರಬಹುದು ಎಂಬ ನಂಬಿಕೆಯನ್ನ ಕಾಂಗ್ರೆಸ್ ನಾಯಕರು ಹೊಂದಿದ್ದರು. ಆದರೆ ಆ ಊಹೆ ಸುಳ್ಳಾಗಿದೆ. ಕಾಂಗ್ರೆಸ್ ಸೋತ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ನವದೆಹಲಿಗೆ ಭೇಟಿ ನೀಡಿದ್ದರು. ರಾಜ್ಯದಲ್ಲೂ ಸಾಕಷ್ಟು ವಿಚಾರಗಳು ಚರ್ಚೆಯಲ್ಲಿವೆ. ದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವ ಸಿದ್ದರಾಮಯ್ಯ ಅವರು ಸಂಪುಟದ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸ್ವತಃ ಸಿದ್ದರಾಮಯ್ಯ ಅವರೇ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದೇನೆ. ಆದರೆ ನಾನು ಅವರ ಬಳಿ ಮಾತನಾಡಿದ್ದು ಬರೀ ಬಿಹಾರ ಚುನಾವಣೆಯ ಬಗ್ಗೆ ಚರ್ಚೆ ಮಾಡಿದ್ದೇನೆ ಅಷ್ಟೇ ಎಂದಿದ್ದಾರೆ. ನವೆಂಬರ್ ಕ್ರಾಂತಿ.. ಸಚಿವ ಸಂಪುಟದ ಬಗ್ಗೆ ಚರ್ಚೆ ಆಯ್ತಾ ಎಂದು ಕೇಳಿದಾಗ, ಯಾರು ಹೇಳಿದ್ದು ಅದನ್ನೆಲ್ಲ ನಿಮಗೆ. ಆ ಸಂಬಂಧ ನಾನು ಏನನ್ನು ಮಾತನಾಡಿಲ್ಲ. ಬಿಹಾರ ಎಲೆಕ್ಷನ್ ಬಗ್ಗೆ ಮಾತನಾಡಿದೆ.

ಅವರು ನಮ್ಮ ನಾಯಕರು ಅಲ್ವಾ. ಅವರಿಗೆ ಸಿಗಬೇಕಿತ್ತು. ಆ ಸಂಬಂಧ ಸ್ವಲ್ಪ ಸಮಾಧಾನ ಮಾಡಿದೆ. ನೀವೂ ಕೇಳುತ್ತಿರುವ ಪ್ರಶ್ನೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಸೋತಿರುವುದರ ಬಗ್ಗೆ ನಾನೇನು ಬೇಸರ ಮಾಡಿಕೊಂಡಿಲ್ಲ ಎಂಬ ಮಾತನ್ನ ನಮ್ಮ ನಾಯಕರು ಹೇಳಿದ್ದಾರೆ. ನೀವೂ ಧೈರ್ಯವಾಗಿರಿ, ನಿಮ್ಮ ಜೊತೆಗೆ ನಾವೂ ಇದ್ದೀವಿ ಎಂಬ ಮಾತನ್ನ ಹೇಳಿ ಬಂದಿದ್ದೀನಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲೂ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ‌. ಈ ಬಾರಿ ನಮಗೂ ಸಚಿವ ಗಿರಿ ಸಿಗಬಹುದು ಎಂಬ ನಿರೀಕ್ಷೆಯಿಂದ ಇದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now