ಜನರ ನಡುವೆ ಇರುವಂತೆ ಹೈಕಮಾಂಡ್ ಸೂಚಿಸಿದೆ : ಸಿದ್ದರಾಮಯ್ಯ, ಡಿಕೆಶಿ ಜಂಟಿಯಾಗಿ ಹೇಳಿದ್ದೇನು..?

ನವದೆಹಲಿ: ಚುನಾವಣೆ ಹತ್ತಿರವಾಗುತ್ತಿದೆ. ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಈ ಮಧ್ಯೆ ಎಲ್ಲಾ ಪಕ್ಷದಲ್ಲೂ ಆಂತರಿಕ ಮುನಿಸು, ಕೋಪ ಇರೋದು ಗುಟ್ಟಾಗಿ ಏನು ಉಳಿದಿಲ್ಲ. ಅದರಲ್ಲೂ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಎಂಬ ಎರಡು ಬಣ ಇದೆ ಅನ್ನೋದು ಸಪರೇಟ್ ಆಗಿ ಹೇಳಬೇಕಿಲ್ಲ. ಇದೀಗ ಅದನ್ನ ಶಮನ ಮಾಡಿ, ನಾವೆಲ್ಲಾ ಒಂದು ಎಂಬಂತೆ ಮಾಡುವ ಪ್ರಯತ್ನಕ್ಕೆ ಹೈಕಮಾಂಡ್ ಕೈ ಹಾಕಿದೆ. ಅದರ ಫಲವಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ್ದಾರೆ.

ದೆಹಲಿಯಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು, ಚುನಾವಣೆಗೆ ಇನ್ನು ಒಂದು ವರ್ಷವಿದೆ. ಆದರೆ ಜನರ ಸಮಸ್ಯೆ ಅರಿತು ಸ್ಪಂದಿಸಬೇಕೆಂದು ಹೈಕಮಾಂಡ್ ಸೂಚಿಸಿದೆ. ಜನರ ನಡುವೆ ಇದ್ದು, ಅವರ ಸಮಸ್ಯೆಗಳನ್ನ ಆಲಿಸುತ್ತೇವೆ ಎಂದು ಇಬ್ಬರು ನಾಯಕರು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಫೆ. 17 ರಿಂದ ನೀರಿಗಾಗಿ ನಡಿಗೆ ಆರಂಭಿಸುತ್ತೇವೆ. ಪಾದಯಾತ್ರೆ ನಿಂತಲ್ಲಿಂದಲೇ ಮತ್ತೆ ಆರಂಭವಾಗುತ್ತದೆ. ಕುಡಿಯುವ ನೀರಿಗಾಗಿ ಜನ ಕೂಡ ಭಾಗಿಯಾಗಬೇಕೆಂದು ಕಾಂಗ್ರೆಸ್ ಮನವಿ ಮಾಡಿದೆ ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ಮಾತನಾಡಿ, ಆಪರೇಷನ್ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವ ಅಭಿವೃದ್ಧಿಯನ್ನು ಮಾಡಿಲ್ಲ. ರಾಜ್ಯದ ಜನ ಶಾಪ ಹಾಕುತ್ತಾ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಜಾರಕ್ಕೆ ಬರುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *