ರಾಹುಲ್ ಗಾಂಧಿ – ರಾವಣ ಪೋಸ್ಟರ್ : ಚಿತ್ರದುರ್ಗದಲ್ಲಿ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.07 : ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ರಾಹುಲ್‍ಗಾಂಧಿಯನ್ನು ರಾವಣನಿಗೆ ಹೋಲಿಸಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಎ.ಐ.ಸಿ.ಸಿ. ಅಧ್ಯಕ್ಷರಾಗಿದ್ದ ರಾಹುಲ್‍ಗಾಂಧಿ ಭಾರತ್ ಜೋಡೊ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿರುವುದನ್ನು ಸಹಿಸಿಕೊಳ್ಳಲು ಆಗದ ಕೋಮುವಾದಿ ಬಿಜೆಪಿ.ಯವರು ಸಾಮಾಜಿಕ ಜಾಲತಾಣದಲ್ಲಿ ರಾಹುಲ್‍ಗಾಂಧಿಯನ್ನು ರಾವಣನಿಗೆ ಹೋಲಿಕೆ ಮಾಡಿ ಅವಮಾನಿಸಿರುವುದನ್ನು ಸಹಿಸುವುದಿಲ್ಲ. ಕಾರ್ಮಿಕರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ ಜೊತೆ ಸಾಮಾನ್ಯರಲ್ಲಿ ಅತಿ ಸಾಮಾನ್ಯರಂತೆ ಬೆರೆತು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್‍ಗಾಂಧಿ ಸಮಸ್ಯೆಗಳನ್ನು ಆಲಿಸಿದ್ದು, ಬಿಜೆಪಿ.ಯವರಿಗೆ ಭಯ ಹುಟ್ಟಿರುವುದರಿಂದ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ರಾಹುಲ್‍ಗಾಂಧಿ ಒಬ್ಬ ವ್ಯಕ್ತಿಯಲ್ಲ. ಅವರೊಬ್ಬ ಶಕ್ತಿಯಿದ್ದಂತೆ ಯಾವಾಗಲು ಕಾರ್ಯಕರ್ತರು ಅವರ ಜೊತೆಯಿದ್ದು, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಶ್ರೀಮತಿ ರೇಣುಕಶಿವು, ಹಿರಿಯ ಉಪಾಧ್ಯಕ್ಷರುಗಳಾದ ಎನ್.ಬಿ.ಟಿ.ಜಮೀರ್, ಎಸ್.ಎನ್.ರವಿಕುಮಾರ್, ಭಾಗ್ಯಮ್ಮ, ಇಂಟೆಕ್ ಜಿಲ್ಲಾಧ್ಯಕ್ಷ ಅಶೋಕ್‍ನಾಯ್ಡು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಕೆ.ಪಿ.ಸಿ.ಸಿ. ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೆಹಬೂಬ್‍ಖಾತೂನ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಸೈಯದ್ ಖುದ್ದೂಸ್, ಎಸ್.ಸಿ.ವಿಭಾಗದ ಉಪಾಧ್ಯಕ್ಷ ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಮುದಸಿರ್ ನವಾಜ್, ಮೊಹಿದ್ದೀನ್ ಚೋಟು, ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *