Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಯಚೂರು: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಅಡಿ ಆರೋಪಿ ಬಂಧನ

---Advertisement---

ರಾಯಚೂರು.ಜೂನ್.17: ಜಿಲ್ಲೆಯ ಸಿಂಧನೂರು ನಗರದಲ್ಲಿ ಎಂಟು ಮತ್ತು ಒಂಬತ್ತು ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಸಿಂಧನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ನಗರದ ನಿವಾಸಿ ಬಾಬುಸಾಬ್ ಬಂಧಿತ ಆರೋಪಿಯಾಗಿದ್ದಾನೆ.

ಬಾಲಕಿಯರ ಮೇಲಿನ ದೌರ್ಜನ್ಯದ ಹಿನ್ನೆಲೆಯಲ್ಲಿ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹಾಗೂ ಉಪವಿಭಾಗೀಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ಕೈಗೊಂಡ ನಗರ ಠಾಣೆಯ ಪೊಲೀಸರು ಸದ್ಯ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಬಾಬುಸಾಬ್‌ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now