ಬಳ್ಳಾರಿ: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಿಬಿಐ ಶಾಕ್ ನೀಡಿದೆ. ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ನಾಲ್ವರು ಅಧಿಕಾರಿಗಳಿಂದ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಯುತ್ತಾ ಇದೆ. ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಠಾಣೆಗೆ ಕುಟುಂಬಸ್ಥರನ್ನ ಕರೆತಂದಿದ್ದಾರೆ. ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಅಧಿಕಾರಿಯೊಬ್ಬರ ಆತ್ಮಹತ್ಯೆಯಿಂದಾಗಿ ನಾಗೇಂದ್ರ ಅವರ ತಲೆದಂಡವಾಗಿತ್ತು. ವಾಲ್ಮೀಕಿ ನಿಗಮದ ಸಚಿವರಾಗಿದ್ದವರು, ತಮ್ಮ ಸಚಿವ ಸ್ಥಾನವನ್ನ ಕಳೆದುಕೊಳ್ಳಬೇಕಾಯ್ತು. ಈ ಸಂಬಂಧ ವಿಚಾರಣೆಯನ್ನು ಎದುರಿಸಿದ್ದರು, ಜೈಲುವಾಸವನ್ನು ಅನುಭವಿಸಿದ್ದರು. ಇದೀಗ ಅವರ ಪರಮಾಪ್ತರಾಗಿರುವ ವಿಶ್ವನಾಥ್ ಅವರ ಮನೆ ಮೇಲೆ ದಾಳಿಯಾಗಿದೆ. ಇದು ಸಾಕಷ್ಟು ಪ್ರಶ್ನೆಗಳನ್ನ ಹುಟ್ಟು ಹಾಕಿದೆ. ದಾಳು ಆಗಿರುವುದು ಯಾಕೆ ಎನ್ನುವ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇದು ಕೂಡ ಈ ಹಿಂದಿನ ಕೇಸ್ ಗೆ ಸಂಬಂಧಿಸಿದ ದಾಳಿನಾ ಅಥವಾ ಬೇರೆ ಏನಾದರೂ ಕಾರಣವಿದೆಯಾ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಮಾಜಿ ಸಚಿವ ನಾಗೇಂದ್ರ ಅವರ 8.07 ಕೋಟಿ ರೂಪಾಯಿ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್‌ಗಳಡಿ ನಾಗೇಂದ್ರ ಅವರಿಗೆ ಸೇರಿದ ವಸತಿ, ವಾಣಿಜ್ಯ ನಿವೇಶನ ಮತ್ತು ಕಟ್ಟಡ ಸೇರಿದಂತೆ ನಾಲ್ಕು ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. ಈ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಎಂದು ಇ.ಡಿ ಅಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದರು. ಇದೀಗ ಅವರ ಪರಮಾಪ್ತರೇ ಆಗಿರುವ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಸಿ, ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















