Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ : 35 ಪ್ರಕರಣ ದಾಖಲು, ರೂ.4 ಸಾವಿರ ದಂಡ ವಸೂಲಿ

---Advertisement---

ಚಿತ್ರದುರ್ಗ. ಮೇ.19 : ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಸಂತೆ ಮೈದಾನದ ಹತ್ತಿರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಬುಧವಾರ ದಾಳಿ ಮಾಡಿ  ದಂಡ ವಿಧಿಸಿದೆ.

ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ ತಂಬಾಕು ಕಾರ್ಯಾಚರಣೆ ನಡೆಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 29 ಕೇಸುಗಳನ್ನು ದಾಖಲಿಸಿ ರೂ. 3250 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 06 ಕೇಸುಗಳನ್ನು ದಾಖಲಿಸಿ ರೂ. 750 ದಂಡವನ್ನು ವಸೂಲಿ ಮಾಡಲಾಯಿತು.

ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೆಂಕಟೇಶ್, ಎಂ.ಹೆಚ್.ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾಧಿಕಾರಿಗಳ ಕಚೇರಿ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...