Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈಲ್ವೇ ಭೂಸ್ವಾಧೀನ: ನಿಯಮಾನುಸಾರ ರೈತರಿಗೆ ಪರಿಹಾರ ನೀಡಿ : ಸಂಸದ ಗೋವಿಂದ ಕಾರಜೋಳ ಸೂಚನೆ

---Advertisement---

ಚಿತ್ರದುರ್ಗ. ಜುಲೈ.17: ಜಿಲ್ಲೆಯ ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ, ರೈತರ ಹಿತ ಕಾಪಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತುಕಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ನೇರ ರೈಲ್ವೇ ಮಾರ್ಗ ಮತ್ತು ಚಿಕ್ಕಜಾಜೂರು-ಬಳ್ಳಾರಿ ರೈಲ್ವೇ ಡಬ್ಲಿಂಗ್ ಯೋಜನೆಗೆ ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ತಡವಾದಷ್ಟು ರೈಲ್ವೇ ಯೋಜನೆಗಳ ವೆಚ್ಚವೂ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿ ಸರ್ಕಾರ ನಷ್ಟ ಉಂಟಾಗುತ್ತದೆ. ಜಿಲ್ಲೆಯ ರೈತರು ರೈಲ್ವೇ ಅಭಿವೃದ್ಧಿ ಭೂಮಿ ನೀಡಲು ಸಿದ್ದರಿದ್ದಾರೆ, ಆದರೆ ನೀಡುವ ಭೂಮಿಗೆ ಸೂಕ್ತ ಬೆಲೆ ಅಪೇಕ್ಷಿಸುತ್ತಿದ್ದಾರೆ. ಹೊಳಲ್ಕೆರೆ ಭಾಗ ಅರೆ ಮಲೆನಾಡು ಪ್ರದೇಶವಾಗಿದ್ದು, ರೈತರು ಜಮೀನುಗಳಲ್ಲಿ ಅಡಿಕೆ, ಮಾವಿನ ತೋಟಗಳನ್ನು ಮಾಡಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಬೆಳೆಗಳಿಗೆ ಸೂಕ್ತ ಪರಿಹಾರ ದೊರಕುವಂತೆ ತಮ್ಮ ವರದಿ ನೀಡಬೇಕು. ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಸರ್ವೇ ಕಾರ್ಯಕ್ಕೆ ಸಹಕರಿಸಲು ರೈತರಲ್ಲಿ ಮನವಿ:
ಸಭೆಯಲ್ಲಿ ರೈತರ ಮುಖಂಡರಿಗೆ ಭೂಸ್ವಾಧೀನ ಪಡಿಸಿಕೊಳ್ಳೂವ ಭೂಮಿಗೆ ಸೂಕ್ತ ಬೆಲೆ ನೀಡುವ ಭರವಸೆ ನೀಡಿದ ಸಂಸದ ಗೋವಿಂದ ಎಂ ಕಾರಜೋಳ, ಭೂಸ್ವಾಧೀನ ಹಾಗೂ ರೈಲೈ ಅಧಿಕಾರಿಗಳ ಸರ್ವೇ ಕಾರ್ಯಕ್ಕೆ ಸಹಕರಿಸುವಂತೆ ಕೋರಿದರು.

ಭೂಸ್ವಾಧೀನ, ರೈಲ್ವೇ, ಕಂದಾಯ, ತೋಟಗಾರಿಕೆ, ಕೃಷಿ, ಅರಣ್ಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವುದರ ಜೊತೆಗೆ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳನ್ನು ಶೀಘ್ರವಾಗಿ ಪರಿಹರಿಸಬೇಕು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಯಾವುದೇ ಆತಂಕ ಬೇಡ, ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರುಕಟ್ಟೆ ಮೌಲ್ಯದ ದರ ಆಧರಿಸಿ ಮೂಲ ಬೆಲೆ ನಿಗದಿಪಡಿಸಲಾಗುತ್ತದೆ. ಇದರ ಆಧಾರ ಮೇಲೆ ಭೂಮಿಗೆ ಹೆಚ್ಚಿನ ಬೆಲೆ ದೊರಕುತ್ತದೆ. ಇದರೊಂದಿಗೆ ಜಮೀನಿನಲ್ಲಿ ಇರುವ ಬೆಳೆ, ತೋಟಗಾರಿಕೆ ಬೆಳೆಗಳು, ಪಶು ಸಂಗೋಪನೆಗಾಗಿ ನಿರ್ಮಿಸಿರುವ ಕಟ್ಟಡ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ನಿರ್ಮಿಸಿದ ಇತರೆ ನಿರ್ಮಾಣಗಳಿಗೂ ಪರಿಹಾರ ದೊರಕಲಿದೆ. ನಿಯಮಗಳ ಅಡಿ ರೈತರಿಗೆ ದೊರಕಬೇಕಾಗದ ಗರಿಷ್ಠ ಮಟ್ಟದ ಪರಿಹಾರಗಳನ್ನು ದೊರಕಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

 

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಒಟ್ಟು 1405 ಎಕರೆ ಭೂಮಿ ಅವಶ್ಯಕತೆ ಇದ್ದು, ಈ ಪೈಕಿ 1211 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ರೈಲ್ವೇ ಇಲಾಖೆ ಜಮೀನು ಹಸ್ತಾಂತರಿಸಲಾಗಿದೆ. ನೇರ ರೈಲ್ವೇ ಕಾಮಗಾರಿಯೂ ಪ್ರಗತಿಯಲ್ಲಿದೆ.

ರೈಲ್ವೇ ಮೇಲ್ಸೇತುವೆ, ಕೆಳಸೇತುವೆ, ವಿದ್ಯುತ್ ಉಪ ಕೇಂದ್ರ ಹಾಗೂ ಜಾಲಗಳ ನಿರ್ಮಾಣಕ್ಕೆ ಒಟ್ಟು 194 ಎಕರೆ ಭೂ ಅವಶ್ಯಕತೆ ಇದ್ದು, ಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪೈಕಿ ಚಿತ್ರದುರ್ಗ ಹಾಗೂ ಭರಮಸಾಗರ ಮಧ್ಯ 56 ಎಕರೆ ಭೂ ಸ್ವಾಧೀನಕ್ಕೆ ಜಂಟಿ ಅಳತೆ ಸಮೀಕ್ಷೆ (ಜೆ.ಎಂ.ಸಿ)ಯನ್ನು ಸಹ ಪೂರ್ಣಗೊಳಿಸಲಾಗಿದೆ. ಪಾಲವ್ವನಹಳ್ಳಿ-ಚಿತ್ರದುರ್ಗದ ಮದ್ಯ 28-25 ಎಕರೆ ಭೂಮಿ ಅವಶ್ಯಕತೆ ಇದೆ. ನಕ್ಷೆ ಹಾಗೂ ಭೂ ದಾಖಲೆಗಳ ತಯಾರಿಕೆ 15 ದಿನಗಳ ಅವಶ್ಯಕತೆಯಿದೆ. ಹಿರಿಯೂರು ತವರಕೆರೆ ಮಧ್ಯೆ 31 ಎಕರೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. 60 ದಿನ ನೋಟಿಸ್ ಅವಧಿ ಪೂರ್ಣಗೊಂಡ ನಂತರ ಭೂಮಿ ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುವುದು. ಇದೇ ಮಾದರಿಯಲ್ಲಿ ಚಿತ್ರದುರ್ಗ ಹಿರಿಯೂರು ಮಧ್ಯೆ 79 ಎಕೆರೆ ಭೂಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ.

 

ಚಿಕ್ಕಚಾಜೂರು-ಬಳ್ಳಾರಿ ನಡುವಿನ ರೈಲ್ವೇ ಮಾರ್ಗ ಡಬ್ಲಿಂಗ್ ಯೋಜನೆಗೆ ಹೊಳಲ್ಕೆರೆ ತಾಲ್ಲೂಕಿನಲ್ಲಿ 86 ಎಕರೆ 01 ಗುಂಟೆ ಚಿತ್ರದುರ್ಗ ತಾಲ್ಲೂಕಿನಲ್ಲಿ 72 ಎಕರೆ 12 ಗುಂಟೆ, ಚಳ್ಳಕೆರೆ ತಾಲ್ಲೂಕಿನಲ್ಲಿ 120 ಎಕರೆ 38 ಗುಂಟೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 34 ಎಕರೆ 11 ಗುಂಟೆ ಭೂಮಿ ಅಗತ್ಯತೆಯನ್ನು ರೈಲ್ವೇ ಇಲಾಖೆಯಿಂದ ನೀಡಲಾಗಿದೆ. ಈಗಾಗಲೇ ಹೊಳಲ್ಕೆರೆ ತಾಲ್ಲೂಕಿಗೆ ಸಂಬAಧಿಸಿದAತೆ 86 ಎಕರೆ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರದಲ್ಲೇ ಉಳಿದ ತಾಲ್ಲೂಕುಗಳಿಗೂ ಸಂಬAಧಿಸಿದAತೆ ಅಧಿಸೂಚನೆ ಹೊರಡಿಸುವುದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸಭೆಯಲ್ಲಿ ಮಾಹಿತಿ ನೀಡಿದರು.

 

ಆಶ್ರಯ ನಿವೇಶನ : ಲೇ ಔಟ್ ನಿರ್ಮಿಸಲು ಸೂಚನೆ
ಇದೇ ಸಂದರ್ಭದಲ್ಲಿ ಆಶ್ರಯ ಸಮಿತಿ ಸಭೆಯ ನಡೆಸಿದ ಸಂಸದ ಗೋವಿಂದ ಎಂ ಕಾರಜೋಳ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆಶ್ರಯ ನಿವೇಶನ ಹಂಚಿಕೆಗಾಗಿ 1087 ಎಕರೆ ಜಾಗ ಗುರುತಿಸಿ ಮೀಸಲು ಇರಿಸಲಾಗಿದೆ. ಶೀಘ್ರವೇ ಈ ಜಾಗದಲ್ಲಿ ಜಿಲ್ಲಾ ಪಂಚಾಯಿತಿಯಿAದ ಲೇ ಔಟ್ ನಿರ್ಮಿಸಬೇಕು. ನಗರ ಪ್ರದೇಶದಲ್ಲಿ ಸ್ಲಂಬೋರ್ಡ್ ವತಿಯಿಂದ ನಿರ್ಮಿಸಿದ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಸ್.ಜೆ.ಕಾಂತರಾಜು, ಜಿ.ಪಂ.ಸಿಪಿಓ ಗಾಯತ್ರಿ, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ರೈಲ್ವೇ ಇಂಜಿನಿಯರ್‌ಗಳಾದ ಮುನಿಕೃಷ್ಣ, ಹರೀಶ್, ರಜತ್ ಸೇರಿದಂತೆ ಮುತ್ತಿರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now