Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವ; ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಆದೇಶ

---Advertisement---

ಬೆಂಗಳೂರು.ಜುಲೈ.19: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೈಕೊಟ್ಟಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಹತ್ವದ ವಿಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ಮಾರ್ಗದರ್ಶನಗಳನ್ನು ನೀಡಿದರು.

ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಧಾರಗಳು ಹಾಗೂ ರಾಜ್ಯದ ಸದ್ಯದ ಭೀಕರ ಬರ ಪರಿಸ್ಥಿತಿಯ ವಿವರಗಳು ಈ ಕೆಳಗಿನಂತಿವೆ.

• ₹1 ಕೋಟಿ ಹೆಚ್ಚುವರಿ ಅನುದಾನ: ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ ಅನುದಾನ ಘೋಷಣೆ.

• ಬೋಗಸ್ ಬೋರ್ವೆಲ್ಗೆ ಬ್ರೇಕ್: ಹೊಸ ಬೋರ್ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ.

• ಕೇಂದ್ರಕ್ಕೆ ಶೀಘ್ರ ವರದಿ: ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆ; ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಲು ಸೂಚನೆ.

• ರೈತರ ಹಿತರಕ್ಷಣೆಗೆ ಆದ್ಯತೆ: ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.

• ವಿದ್ಯುತ್ ವ್ಯವಸ್ಥೆ: ಟ್ರಾನ್ಸ್ಫಾರ್ಮರ್ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್ಫಾರ್ಮರ್ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ.

• ‘TEAM KARNATAKA’ ಮನಸ್ಥಿತಿ: ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್ಗಿಳಿದು ಆಡಳಿತಾತ್ಮಕ ಟೀಮ್ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು.

ರಾಜ್ಯದ ಮಳೆ ಹಾಗೂ ಜಲಮಟ್ಟದ ಪ್ರಸ್ತುತ ಅಂಕಿ-ಅಂಶಗಳು:

• ಮಳೆ ಕೊರತೆ: ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆ. 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವ (ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ -67% ಕೊರತೆ).

• ಪ್ರಾದೇಶಿಕ ಕೊರತೆ: ಮಲೆನಾಡು (-43%), ಕರಾವಳಿ (-35%), ಉತ್ತರ ಒಳನಾಡು (-33%), ದಕ್ಷಿಣ ಒಳನಾಡು (-31%).

• ಜಲಾಶಯಗಳ ಸ್ಥಿತಿ: ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ (ಪ್ರಸ್ತುತ 359.98 ಟಿಎಂಸಿ, ಕಳೆದ ವರ್ಷ 681.83 ಟಿಎಂಸಿ ಇತ್ತು).

• ಜಲವಿದ್ಯುತ್ ಜಲಾಶಯಗಳು: ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ.

• ರೈತರ ಹಿತರಕ್ಷಣೆಗೆ ಆದ್ಯತೆ: ರೈತರು ಕಡಿಮೆ ನೀರಿನ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು, ಸಚಿವರುಗಳಾದ ರಾಮಲಿಂಗಾ ರೆಡ್ಡಿ,  ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now