Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ವರದಿ : ನಾಯಕನಹಟ್ಟಿಯಲ್ಲಿ ಅತಿ ಹೆಚ್ಚು..!

Facebook
Twitter
Telegram
WhatsApp

 

ಚಿತ್ರದುರ್ಗ,(ಮೇ.12): ಜಿಲ್ಲೆಯಲ್ಲಿ ಮೇ 12ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 13.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.4 ಮಿ.ಮೀ, ತಳುಕು 8.4 ಮಿ.ಮೀ, ಡಿ.ಮರಿಕುಂಟೆ 2.3 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 3.2 ಮಿಮೀ, ಚಿತ್ರದುರ್ಗ-2ರಲ್ಲಿ 1 ಮಿ.ಮೀ, ಭರಮಸಾಗರದಲ್ಲಿ 5 ಮಿ.ಮೀ, ಸಿರಿಗೆರೆ 3.2 ಮಿ.ಮೀ, ತುರುವನೂರು 12.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ  ತಾಲ್ಲೂಕಿನ ಹೊಸದುರ್ಗದಲ್ಲಿ 4.2 ಮಿ.ಮೀ, ಬಾಗೂರು 3.2, ಶ್ರೀರಾಂಪುರ 4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.2 ಮಿ.ಮೀ, ಬಿ.ದುರ್ಗ 8.4 ಮಿ.ಮೀ, ಹೆಚ್.ಡಿ.ಪುರ 2.2 ಮಿ.ಮೀ, ತಾಳ್ಯ 1.2 ಮಿ.ಮೀ, ರಾಮಗಿರಿ 7.2 ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು ಟೌನ್‍ನಲ್ಲಿ 4.6 ಮಿ.ಮೀ. ಬಬ್ಬೂರು 5.4 ಮಿ.ಮೀ, ಇಕ್ಕನೂರು 1.4 ಮಿ.ಮೀ, ಈಶ್ವರಗೆರೆ 1 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರದಲ್ಲಿ 1 ಮಿ.ಮೀ,  ಬಿ ಜಿ ಕೆರೆ 10.4 ಮಿ.ಮೀ, ರಾಯಪುರ 1.4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!