ಬೆಂಗಳೂರು; ರಾಜ್ಯಾದ್ಯಂತ ಈಗಾಗಲೇ ಮಳೆಗಾಲ ಶುರುವಾಗಿದೆ. ಮಳೆಗಾಲ ಶುರುವಾದ್ರೆ ಅದರ ಹಿಂದೆಯೇ ಅವಾಂತರಗಳು ಸೃಷ್ಟಿಯಾಗುತ್ತವೆ. ಇನ್ನು ಎರಡು ದಿನಗಳ ಕಾಲ ಮಳೆಗಾಲ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಮೇ 19 ರ ತನಕ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಈ ಭಾಗದಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಗೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದೆ ಎಂಬ ಮಾಹಿತಿಯನ್ನ ನೀಡಲಾಗಿದೆ. ಮುಂಗಾರು ಮಳೆ ಬೇಗ ಶುರುವಾಗುತ್ತಿದೆ. ಅಂದ್ರೆ ಐದು ದಿನ ಮೊದಲೇ ಮುಂಗಾರು ಮಳೆ ಶುರುವಾಗಲಿದೆ. ಒಂದು ವಾರ ಮೊದಲೇ ಶುರುವಾದ ಕಾರಣ ರೈತರು ಕೂಡ ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ಮುಳುಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಈಗಾಗಲೇ ಮಳೆ ಶುರುವಾಗಿದೆ. ಹಲವು ಕಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು ಕೂಡ ಎಚ್ಚರಿಕೆಯಿಂದ ಇರಬೇಕಾಗಿದೆ. ಯಾಕಂದ್ರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಹೊರಗೆ ಹೋದವರು ಮಳೆ ಬಂದಾಗ ಮರಗಳ ಕೆಳಗಡೆ ಆಶ್ರಯ ಪಡೆದುಕೊಳ್ಳುವ ದುಸ್ಸಾಹಸ ಮಾಡಬೇಡಿ ಎಂಬ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಜಾಗೃತಿಯನ್ನ ಮೂಡಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











