Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಸಿಲ ಹೆಚ್ಚಳದ ನಡುವೆ ಮಳೆಯ ಮುನ್ಸೂಚನೆ : ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

---Advertisement---

ಬೆಂಗಳೂರು: ಏಪ್ರಿಲ್ ತಿಂಗಳಲ್ಲಂತೂ ಬಿಸಿಲಿನ ತಾಪ ಜನರಿಂದ ಸಹಿಸೋದಕ್ಕೆ ಸಾಧ್ಯವಾಗ್ತಿಲ್ಲ. ತಜ್ಞರು ಕೂಡ ಈ ಸಂಬಂಧ ಎಚ್ಚರಿಕೆಯನ್ನ ನೀಡಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೂ ಹೊರಗೆ ಬರುವುದಕ್ಕೆ ಹೋಗಬೇಡಿ ಎಂಬ ಸಲಹೆಯನ್ನ ತಿಳಿಸಿದ್ದಾರೆ. ತಾಪಮಾನ ಜಾಸ್ತಿ ಇದ್ದಾಗ ಆ ಬಿಸಿಲಿಗೆ ತಲೆ ಸುತ್ತಿ ಬೀಳುವ ಸಾಧ್ಯತೆಗಳು ಇರುತ್ತವೆ.

ಹವಮಾನ ಇಲಾಖೆ ಈ ಸಂಬಂಧ ಎಚ್ಚರಿಕೆಯನ್ನ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಏಪ್ರಿಲ್ 15 ರಿಂದ ಏಪ್ರಿಲ್ 18ರವರೆಗೂ ಉಷ್ಣ ಅಲೆಗಳು ಬರುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಸುಮಾರು 37 ರಿಂದ 38 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯೂ ಇದೆ. ಈ ಹೀಟ್ ವೇವ್ ಜೊತೆಗೆ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನಲ್ಲಿ ಟಫ್ ಇರುವುದರ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 15 ರಂದು ಬೆಂಗಳೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಪ್ಪಳ, ಗದಗ, ಹಾವೇರು, ಧಾರವಾಡ, ಬಾಗಲಕೋಟೆ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಏಪ್ರಿಲ್ 16ರಂದು ಮಂಡ್ಯ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ಭಾಗದಲ್ಲಿ ಮಳೆಯಾಗಲಿದೆ. ಆದರೆ ಬಿಸಿಲಿನ ತಾಪಮಾನ ಹೆಚ್ಚಾವಿರುವ ಕಾರಣ ಹೊರಗೆ ಹೋಗುವವರು ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಬಹಳ ಉತ್ತಮ. ಇಲ್ಲಂದ್ರೆ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...