Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ ಅ.21ರವರೆಗೆ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

---Advertisement---

ಬೆಂಗಳೂರು : ರಾಜ್ಯದಿಂದ ನೈಋತ್ಯ ಮುಂಗಾರು ಅಧಿಕೃತವಾಗಿ ನಿರ್ಗಮಿಸಿದ್ದು, ಇದರ ಬೆನ್ನಲ್ಲೇ ದಕ್ಷಿಣ ಒಳನಾಡಿನ ಹಲವೆಡೆ ಮಳೆಯೊಂದಿಗೆ ಹಿಂಗಾರು ಮಾರುತಗಳು ಪ್ರವೇಶ ಪಡೆದಿವೆ. ಇದರ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಿಂದ 21ರ ವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಜೊತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೈಸೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಅಕ್ಟೋಬರ್ 17ರಿಂದ 21ರ ಅವಧಿಯಲ್ಲಿ ದಾವಣಗೆರೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Join WhatsApp

Join Now

Join Telegram

Join Now