ಬೆಂಗಳೂರು; ಬೆಳಗ್ಗೆಯಿಂದ ಮಾಮೂಲಿ ವಾತಾವರಣವಿದ್ದ ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಮೂಡಿತ್ತು. ಜೋರು ಮಳೆ ಶುರುವಾಯ್ತು. ನೋಡ ನೋಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಿದೆ. ಬನಶಂಕರಿ, ಜಯನಗರ, ಬಸವನಗುಡಿ, ಜೆಪಿ ನಗರ, ಕನಕಪುರ ರಸ್ತೆ, ಸಾರಕ್ಕಿ, ವಿಜಯನಗರ, ಚಂದ್ರಾಲೇಔಟ್, ಮಾಗಡಿ ರಸ್ತಡ, ದೀಪಾಂಜಲಿ ನಗರ, ಮೈಸೂರು ರಸ್ತೆ, ನಾಗರಬಾವಿ, ಮೂಡಲಪಾಳ್ಯ ಸೇರಿದಂತೆ ಹಲವು ಭಾಗದಲ್ಲಿ ಜೋರು ಮಳೆಯಾಗಿದೆ.
ಮೇ 13-19ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಾಕ ಮಳೆಯಾಗಲಿದ್ದು, ಮೇ 15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 14ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಮೇ 15ರಂದು ವಿಜಯಪುರ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮೇ 13ರಿಂದ 19ರವರೆಗೆ ಮಳೆಯಾಗಲಿದ್ದು, ಮೊದಲ 2 ದಿನ ಹೊರತುಪಡಿಸಿ ಉಳಿದ ಎಲ್ಲಾ ದಿನ ವ್ಯಾಪಕ ಮಳೆಯಾಗಲಿದೆ.
ಮೇ 13ರಂದು ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆಯಾಗಿದೆ. ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆಯಾಗಲಿದೆ. ಬೆಂಗಳೂರಿನ ಹಲವು ಭಾಗದಲ್ಲಿ ಜೋರು ಮಳೆಯಾಗಲಿದೆ. ಈಗಾಗಲೇ ಜೋರು ಮಳೆಯಾಗುತ್ತಿದೆ. ಇದ್ದಕ್ಕಿದ್ದ ಹಾಗೇ ಮಳೆಯಾಗಿದ್ದರಿಂದ ವಾಹನ ಸವಾರರಿಗೆ ಸಮಸ್ಯೆ ಉಂಟಾಗಿದೆ.


