Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಲಿಕಾ‌ನ್ ಸಿಟಿ ಸೇರಿದಂತೆ ಹಲವೆಡೆ ಶುರುವಾಯ್ತು ಮಳೆ ; ಮುಂದಿನ ಒಂದು ವಾರ ಮಳೆಯ ಸೂಚನೆ..!

---Advertisement---

ಬೆಂಗಳೂರು; ಬೆಳಗ್ಗೆಯಿಂದ ಮಾಮೂಲಿ ವಾತಾವರಣವಿದ್ದ ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಮೂಡಿತ್ತು. ಜೋರು ಮಳೆ ಶುರುವಾಯ್ತು. ನೋಡ ನೋಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಿದೆ. ಬನಶಂಕರಿ, ಜಯನಗರ, ಬಸವನಗುಡಿ, ಜೆಪಿ ನಗರ, ಕನಕಪುರ ರಸ್ತೆ, ಸಾರಕ್ಕಿ, ವಿಜಯನಗರ, ಚಂದ್ರಾಲೇಔಟ್, ಮಾಗಡಿ ರಸ್ತಡ, ದೀಪಾಂಜಲಿ ನಗರ, ಮೈಸೂರು ರಸ್ತೆ, ನಾಗರಬಾವಿ, ಮೂಡಲಪಾಳ್ಯ ಸೇರಿದಂತೆ ಹಲವು ಭಾಗದಲ್ಲಿ ಜೋರು ಮಳೆಯಾಗಿದೆ.

ಮೇ 13-19ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಾಕ ಮಳೆಯಾಗಲಿದ್ದು, ಮೇ 15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಮೇ 14ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಮೇ 15ರಂದು ವಿಜಯಪುರ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮೇ 13ರಿಂದ 19ರವರೆಗೆ ಮಳೆಯಾಗಲಿದ್ದು, ಮೊದಲ 2 ದಿನ ಹೊರತುಪಡಿಸಿ ಉಳಿದ ಎಲ್ಲಾ ದಿನ ವ್ಯಾಪಕ ಮಳೆಯಾಗಲಿದೆ.

ಮೇ 13ರಂದು ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆಯಾಗಿದೆ. ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆಯಾಗಲಿದೆ. ಬೆಂಗಳೂರಿನ ಹಲವು ಭಾಗದಲ್ಲಿ ಜೋರು ಮಳೆಯಾಗಲಿದೆ. ಈಗಾಗಲೇ ಜೋರು ಮಳೆಯಾಗುತ್ತಿದೆ. ಇದ್ದಕ್ಕಿದ್ದ ಹಾಗೇ ಮಳೆಯಾಗಿದ್ದರಿಂದ ವಾಹನ ಸವಾರರಿಗೆ ಸಮಸ್ಯೆ ಉಂಟಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment