Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಧಾರಾಕಾರ ಮಳೆ: ಕಾದ ಭೂಮಿಗೆ ವರುಣನ ತಂಪಿನ ಸಿಂಚನ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.18: ಕಡು ಬೇಸಿಗೆಯ ಬಿಸಿಲಿಗೆ ಕಾದ ಹೆಂಚಿನಂತಾಗಿದ್ದ ಕೋಟೆ ನಾಡಿನ ಭೂಮಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದು ರಾತ್ರಿ ಸುಮಾರು 8:15ರ ವೇಳೆಗೆ ಆರಂಭವಾದ ಮಳೆ, ಯಾವುದೇ ಆರ್ಭಟವಿಲ್ಲದೆ ಹದವಾಗಿ ಸುರಿದು ಜನರಲ್ಲಿ ಸಂತಸ ಮೂಡಿಸಿದೆ.

ಮೊದಲಿಗೆ ಸ್ವಲ್ಪ ಗುಡುಗು ಮತ್ತು ಮಿಂಚಿನೊಂದಿಗೆ ಆರಂಭವಾದ ಮಳೆ, ಅರ್ಧ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸತತವಾಗಿ ಸುರಿಯಿತು. ಇದರಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು ರಾತ್ರಿ ಉತ್ತಮ ಮಳೆಯಾಗಿದೆ. ಅಡಿಕೆ ತೋಟದವರು ಈ ಬೇಸಿಗೆಯಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದರು. ಈ ಮಳೆಯಿಂದ ನಿಟ್ಟುಸಿರು ಬಿಡುವಂತಾಗಿದೆ.

ಹಲವು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ :
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ವಿಶೇಷವಾಗಿ ಕೊಪ್ಪಳ, ಧಾರವಾಡ, ಗದಗ್, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ.

ಬೆಂಗಳೂರು ಸೇರಿ ವಿವಿಧೆಡೆ ‘ಯೆಲ್ಲೋ ಅಲರ್ಟ್’
ಚಿತ್ರದುರ್ಗ, ಬೆಳಗಾವಿ, ಮೈಸೂರು, ಮಂಗಳೂರು, ಉಡುಪಿ ಹಾಗೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಮೇ 21ರವರೆಗೆ ಮಳೆಯ ಅಬ್ಬರ:
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 21ರವರೆಗೆ ಮಳೆಯ ಅಬ್ಬರ ಜೋರಾಗಿರಲಿದ್ದು, ಆ ಬಳಿಕ ವಾತಾವರಣ ತಿಳಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...