Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಮಳೆ; 13 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?

---Advertisement---

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜುಲೈ 28ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿನ ವಿವಿಧ ವ್ಯವಸ್ಥೆಗಳ ಪ್ರಭಾವದಿಂದ ರಾಜ್ಯದ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಮಧ್ಯಪ್ರದೇಶದ ಮಧ್ಯಭಾಗದಲ್ಲಿ ಮೇಲ್ಮಟ್ಟದ ವಾಯು ಪರಿಚಲನೆ ಸಕ್ರಿಯವಾಗಿದ್ದು, ಇದು ಸಮುದ್ರಮಟ್ಟದಿಂದ ಸುಮಾರು 7.6 ಕಿ.ಮೀ. ಎತ್ತರದವರೆಗೆ ವ್ಯಾಪಿಸಿದೆ. ಜೊತೆಗೆ ಮುಂಗಾರು ಟ್ರಫ್ (Monsoon Trough) ಬಿಕಾನೇರ್, ಬನಸ್ಥಳಿ ವಿದ್ಯಾಪೀಠ, ಗುನಾ, ದಮೋಹ್, ಪೆಂದ್ರಾ ರೋಡ್ ಮೂಲಕ ಈಶಾನ್ಯ ಬಂಗಾಳ ಕೊಲ್ಲಿಯವರೆಗೆ ವಿಸ್ತರಿಸಿದೆ. ಪೂರ್ವ-ಪಶ್ಚಿಮ ಶಿಯರ್ ವಲಯವೂ (East-West Shear Zone) ಸಕ್ರಿಯವಾಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ಜಲಾಶಯಗಳಿಗೆ ಉತ್ತಮ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಲವು ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆಯಾಗಿದೆ.
ಕರ್ನಾಟಕದ 13 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ: 92.24 ಅಡಿ
ಒಳಹರಿವು: 852 ಕ್ಯೂಸೆಕ್ಸ್
ಹೊರಹರಿವು: 1,801 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ: 2,859 ಅಡಿ
ಇಂದಿನ ಮಟ್ಟ: 2,854.13 ಅಡಿ
ಒಳಹರಿವು: 3,145 ಕ್ಯೂಸೆಕ್ಸ್
ಹೊರಹರಿವು: 180 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ಮಟ್ಟ: 2,284 ಅಡಿ
ಇಂದಿನ ಮಟ್ಟ: 2,277.65 ಅಡಿ
ಒಳಹರಿವು: 3,132 ಕ್ಯೂಸೆಕ್ಸ್
ಹೊರಹರಿವು: 500 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ: 2,922 ಅಡಿ
ಇಂದಿನ ಮಟ್ಟ: 2,904.50 ಅಡಿ
ಒಳಹರಿವು: 1,058 ಕ್ಯೂಸೆಕ್ಸ್
ಹೊರಹರಿವು: 600 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ: 1,819 ಅಡಿ
ಇಂದಿನ ಮಟ್ಟ: 1,767.25 ಅಡಿ
ಒಳಹರಿವು: 13,308 ಕ್ಯೂಸೆಕ್ಸ್
ಹೊರಹರಿವು: 2,199 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ಮಟ್ಟ: 564 ಮೀಟರ್
ಮಾಣಿ ಜಲಾಶಯ
ಗರಿಷ್ಠ ಮಟ್ಟ: 595 ಅಡಿ
ಇಂದಿನ ಮಟ್ಟ: 578.90 ಅಡಿ
ಒಳಹರಿವು: 1,984 ಕ್ಯೂಸೆಕ್ಸ್
ಹೊರಹರಿವು: 1,209 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ: 1,633 ಅಡಿ
ಇಂದಿನ ಮಟ್ಟ: 1,603.54 ಅಡಿ
ಒಳಹರಿವು: 10,938 ಕ್ಯೂಸೆಕ್ಸ್
ಹೊರಹರಿವು: 3,184 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ: 2,079.50 ಅಡಿ
ಇಂದಿನ ಮಟ್ಟ: 2,055.60 ಅಡಿ
ಒಳಹರಿವು: 1,814 ಕ್ಯೂಸೆಕ್ಸ್
ಹೊರಹರಿವು: 194 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ: 2,175 ಅಡಿ
ಇಂದಿನ ಮಟ್ಟ: 2,135.93 ಅಡಿ
ಒಳಹರಿವು: 11,749 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ಮಟ್ಟ: 186 ಅಡಿ
ಇಂದಿನ ಮಟ್ಟ: 150.40 ಅಡಿ
ಒಳಹರಿವು: 6,331 ಕ್ಯೂಸೆಕ್ಸ್
ಹೊರಹರಿವು: 174 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ: 519.60 ಮೀಟರ್
ಇಂದಿನ ಮಟ್ಟ: 518.25 ಮೀಟರ್
ಒಳಹರಿವು: 63,792 ಕ್ಯೂಸೆಕ್ಸ್
ಹೊರಹರಿವು: 42,500 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ: 492.25 ಮೀಟರ್
ಇಂದಿನ ಮಟ್ಟ: 489.26 ಮೀಟರ್
ಒಳಹರಿವು: 14,771 ಕ್ಯೂಸೆಕ್ಸ್
ಹೊರಹರಿವು: 6,000 ಕ್ಯೂಸೆಕ್ಸ್

ರಾಜ್ಯದ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಜುಲೈ 28ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿರುವುದರಿಂದ ನದಿ ಪಾತ್ರದ ಜನರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now