ಬಿರು ಬೇಸಿಗೆಯಲ್ಲಿ ನೊಂದು ಬೆಂದಿದ್ದ ಜನಕ್ಕೆ ಮಳೆರಾಯ ಕೆಲವು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಸುರಿಸಿ ತಂಪಿನ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದಾನೆ. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ದರ್ಶನವಾಗಿದೆ. ಚಂಡಮಾರುತದ ಎಫೆಕ್ಟ್ ನಿಂದಾಗಿ ರಾಜ್ಯಾದ್ಯಂತ ಮಳೆಯ ಅಬ್ಬರ ಇರಲಿದೆ. ಮುಂದಿನ ಒಂದು ವಾರಗಳ ಕಾಲ ಮಳೆರಾಯ ಹೀಗೆ ಮುಂದುವರೆಯಲಿದ್ದಾನೆ. ಹಾಗಾದ್ರೆ ಹವಮಾನ ಇಲಾಖೆ ನೀಡಿರುವ ಸೂಚನೆಯಂತೆ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.
ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಒಣ ಹವಮಾನವಿರಲಿದೆ. ಅದರಲ್ಲೂ ಚಿತ್ರದುರ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನಾಳೆಯಿಂದ ಗುಡುಗು ಸಹಿತ ಜೋರು ಮಳೆಯಾಗಲಿದೆ. ಉಳಿದಂತೆ ಶಿವಮೊಗ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ ಭಾಗದಲ್ಲಿ ಒಣ ಹವಮಾನ ಮುಂದುವರೆಯಲಿದೆ.

ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-4°C ಏರಿಕೆ ಆಗಲಿದೆ. ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆ. ಮುಂದಿನ 5 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಹೊರಗೆ ಹೋಗುವವರು ಕೊಂಚ ಮುಂಜಾಗ್ರತೆಯನ್ನು ವಹಿಸುವುದು ಬಹಳ ಮುಖ್ಯವಾಗುತ್ತದೆ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ಕ್ಯಾರಿ ಮಾಡುವುದೋ ಅಭ್ಯಾಸ ಮಾಡಿಕೊಳ್ಳಿ. ಆಗ ಸಡನ್ ಆಗಿ ಬರುವ ಮಳೆಯಿಂದ ರಕ್ಷಣೆಯನ್ನು ಪಡೆಯಬಹುದು..
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















