ಬೆಂಗಳೂರು: ಈಗಾಗಲೇ ಮಾನ್ಸೂನ್ ಮಳೆ ಆರಂಭವಾಗಿದೆ. ಇಂದಿನಿಂದ ಮತ್ತೆ ಮುಂದಿನ ನಾಲ್ಕು ದಿನಗಳು ಮಳೆ ಮುಂದುವರೆಯಲಿದೆ. 4 ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಗಾಳಿಯ ವೇಗವು ಗಂಟೆಗೆ 40 – 50 ಕಿಮೀ ತನ್ನ ವೇಗವನ್ನು ಹೆಚ್ಚಿಸಿಕೊಳ್ಳಲಿದೆ. ಕರಾವಳಿಯಲ್ಲೂ ವೇಗದ ಬಿರುಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನಲಾಗಿದೆ.
ಇನ್ನು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.