ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು; ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಶುರುವಾಗಿದೆ. ಬೆಳ್ಳಂ ಬೆಳಗ್ಗೆಯೇ ಮಳೆ ಜಿಟಿಜಿಟಿ ಅಂತ ಎಲ್ಲರ ನಿದ್ದೆಯನ್ನು ಕೆಡಿಸುತ್ತಿದೆ. ಎತ್ತು ಹೊಡ್ಕೊಂಡು ಹೊಲದ ಕಡೆ ಹೋಗಿವ ರೈತನಿಗೆ ಖುಷಿಯೇ ಆದರೂ ಕೆಲಸಕ್ಕೆಂದು ಹೊರಡುವ ಜನಕ್ಕೆ ಕಿರಿಕಿರಿಯಾದಂತಾಗಿದೆ. ಇನ್ನು ಐದು ದಿನಗಳ ಕಾಲ ಮಳೆರಾಯ ಬೆಂಬಿಡದೆ ಸುರಿಯುತ್ತಾನೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇಂದಿ ಬೆಳಗ್ಗೆಯೇ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆಯಿಂದಾನೂ ಜಿಟಿಜಿಟಿ ಅಂತ ಮಳೆ ಹಿಡಿದುಕೊಂಡಿತ್ತು. ಇಂದು ಕೆಲವೇ ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಲಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದೆ. ಹೀಗಾಗಿ ಈ ಭಾಗಕ್ಕೆ ಪ್ರವಾಸಕ್ಕೆಂದು ಹೋಗುವ ಜನರು ಎಚ್ಚರದಿಂದ ಇರಬೇಕಾಗಿದೆ.
ಅದರಲ್ಲೂ ಚಿಕ್ಕಮಗಳೂರಿನ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್, ಬಾಳೂರು, ಕೊಟ್ಟಿಗೆಹಾರ, ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿರಲಿದೆ. ಚಿಕ್ಕಮಗಳೂರು ಭಾಗದಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಇನ್ನು ಎರಡು ದಿನ ಮಳೆಯ ಅಬ್ಬರ ಜೋರಾಗಿರಲಿದೆ. ಹೀಗಾಗಿ ಹೊರಗೆ ಹೋಗುವ ಜನರು ಕೂಡ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಮನೆಯಿಂದ ಹೊರಗೆ ಹೋಗುವಾಗ ರೇನ್ ಕೋಟ್, ಕೊಡೆಯನ್ನ ಮರೆಯದೆ ತೆಗೆದುಕೊಂಡು ಹೋಗಿ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್