Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೂ ಮಳೆ : ಎಲ್ಲೆಲ್ಲಿ ಹೇಗಿದೆ ಹವಮಾನ..?

---Advertisement---

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮಳೆ ಹೆಚ್ಚಾಗಿದ್ದು, ರೈತರ ಮೊಗದಲ್ಲಿ ಸಂತಸ ಹೆಚ್ಚಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕಾದ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿ ಸೂಚಿಸಿದೆ.

ಜೋರು ಮಳೆಯ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಜೋರು ಮಳೆಯಾಗುವ ಸೂಚನೆ ಇದೆ. ಬೆಂಗಳೂರಿನಲ್ಲೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂದ್ರೆ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಮಳೆಯಾಗಲಿದೆ.

ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು ಬಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಹಗುರವಾದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಹೀಗಾಗಿ ಹೊರಗೆ ಹೋಗುವಾಗ ಜನ ಕೂಡ ಕೊಂಚ ಎಚ್ಚರದಿಂದ ಇರಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now