ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಸಾಧ್ಯತೆ

0 Min Read

 

ಬೆಂಗಳೂರು: ಕಳೆದ ವಾರದಿಂದ ವಿಶ್ರಾಂತಿ ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ರಾಜ್ಯದಲ್ಲಿ ಇನ್ನು ಎರಡ್ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್ 29ರವರೆಗೂ ಮಳೆಯಾಗುವ ಸೂಚನೆ ಇದ್ದು, ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *