Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡ, ಬಳ್ಳಾರಿ, ವಿಜಯಪುರ ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

---Advertisement---

ಬೆಂಗಳೂರು: ಈಗಷ್ಟೇ ಬೇಸಿಗೆ ಕಾಲ ಶುರುವಾಗಿತ್ತು. ಆರಂಭದಲ್ಲಿಯೇ ಧಗೆಯ ವಾತಾವರಣ ಜೋರಾಗಿತ್ತು. ಇದರಿಂದ ಜನ ಸುಸ್ತಾಗಿ ಹೋಗಿದ್ದರು. ಸದ್ಯ ಮಳೆರಾಯ ತಂಪೆರೆದಿದ್ದು, ಭೂಮಿಯೂ ಸ್ವಲ್ಪ ಕೂಲ್ ಆಗಿದೆ. ನಿನ್ನೆ ಅಂತು ರಾಜ್ಯದ ಹಲವೆಡೆ ಆಲಿಕಲ್ಲಿನ ಮಳೆಯಾಗಿದೆ. ಬಿಸಿಲಿನ ಬಿಸಿಗೆ ಬೆಂದಿದ್ದ ಜನ, ವರ್ಷದ ಮೊದಲ ಮಳೆಗೆ ಮೈಯೊಡ್ಡಿ ಖುಷಿ ಪಟ್ಟಿದ್ದಾರೆ. ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಳಗ್ಗೆಯಿಂದ ಅಷ್ಟೊಂದು ಬಿಸಿಯ ವಾತಾವರಣ ಇಲ್ಲ ಬದಲಿಗೆ ಮೋಡಕವಿದ ವಾತಾವರಣದಂತೆ ಇದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಉಳಿದಂತೆ ವಿಜಯಪುರ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವರುಣನ ಪ್ರಭಾವ ಕಂಡು ಬರಲಿದೆ. ಈ ಭಾಗದ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಕೃಷಿ ಚಟುವಟಿಕೆಗಳಿಗೆ ಇದು ಸಹಕಾರಿಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲೂ ಜೋರು ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ, ಮಳೆಯ ನಿರೀಲ್ಚೆಯನ್ನ ಯಾರು ಮಾಡಿರಲ್ಲ. ಆದರೆ ಯಾವಾಗ ಬೇಕಾದರು ಮಳೆ ಬರಬಹುದಾದಂತ ಪರಿಸ್ಥಿತಿ ಇರುವ ಕಾರಣ, ವಾಹನ ಸವಾರರು ಕೂಡ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಸ್ವಲ್ಪ ಸಮಯ ಮಳೆ ಬಂದಿರುವುದಕ್ಕೇನೆ ತಣ್ಣನೆಯ ಗಾಳಿ ಬೀಸುತ್ತಾ ಇದೆ. ಬಿಸಿ ಗಾಳಿಯನ್ನೇ ಸೇವಿಸಿತ್ತಿದ್ದವರಿಗೆ ಈ ವಾತಾವರಣ ಒಂಥರ ಖುಷಿ ಕೊಟ್ಟಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now