Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ 6 ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ..!

---Advertisement---

ಬೆಂಗಳೂರು: ಒಂದು ಜಡೆ ಜೋರು ಚಳಿ ಇದ್ದರೆ ಮತ್ತೊಂದು ಕಡೆ ಮಳೆಯೂ ಬರ್ತಿದೆ. ಹವಮಾನ ವೈಪರೀತ್ಯದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ‌. ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

 

ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ನಾಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಅಥಬಾ ಒಣ ಹವೆ ಇರಲಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಿತ್ರದುರ್ಗ ಸೇರಿದಂತೆ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಮಂಡ್ಯ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಲಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಕಳೆದ ಎರಡು ದಿನದ ಹಿಂದೆ ಹೊರಗೆ ಬರೋದಕ್ಕೂ ಜನ ಭಯ ಪಡಬೇಕಾಗಿತ್ತು. ಮನೆಯಲ್ಲಿ ಬೆಡ್ ಬಿಟ್ಟು ಕೆಳಗೆ ಇಳಿಯುವುದಕ್ಕೆ ಯೋಚಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ನಾರ್ಮಲ್ ಜಿಲ್ಲೆಗಳು ಸಹ ಚಿಕ್ಕಮಗಳೂರು, ಕೂರ್ಗ್ ರೀತಿಯಲ್ಲಿ ಆಗಿದ್ದವು. ಸದ್ಯ ಇಂದು ಅಷ್ಟೊಂದು ಚಳಿ ಇಲ್ಲ. ಆದರೆ ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now