Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಭಾರಿ ಬದಲಾವಣೆಗಳು ಕಂಡುಬರುತ್ತಿವೆ. ಮುಂಬರುವ ನಾಲ್ಕು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ಒಟ್ಟಾರೆ ಕರಾವಳಿಯಲ್ಲಿ ಮಿಶ್ರ ಹವಾಮಾನ ಕಂಡುಬರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ವಾರಾಂತ್ಯದ ವೇಳೆಗೆ ಮಳೆಯ ಪ್ರಮಾಣ ಇನ್ನಷ್ಟು ವ್ಯಾಪಕವಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಂಭವವಿದ್ದು, ಒಣಹವೆಯ ಜೊತೆಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸೆಕೆ ಮತ್ತು ಆರ್ದ್ರತೆಯ ವಾತಾವರಣದ ನಡುವೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Join WhatsApp

Join Now

Join Telegram

Join Now