ಬೆಂಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಬಿಟ್ಟು ಬಿಡದಂತೆ ಮಳೆ ಹನಿ ಹನಿಯುತ್ತಲೇ ಇದೆ. ಯಾವಾಗ ಸಹಜ ಜೀವನಕ್ಕೆ ಮರಳುತ್ತಿವೋ ಎಂಬ ಅಭಿಲಾಷೆ ಜನರದ್ದು. ಹೀಗಿರುವಾಗ ನವೆಂಬರ್ 16ರ ತನಕ ವಾತಾವರಣ ಹೀಗೆ ಮುಂದುವರೆಯುತ್ತೆ ಎಂಬ ಸೂಚನೆ ನೀಡಿದೆ ಹವಮಾನ ಇಲಾಖೆ.
ಅಕ್ಕಪಕ್ಕದ ರಾಜ್ಯದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ನಮ್ಮ ರಾಜ್ಯದ ಮೇಲೂ ಪರಿಣಾಮ ಬೀರಿದೆ. ಇದೇ ವಾತಾವರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಯವರೆಯಲಿದೆ ಎಂದಿದ್ದಾರೆ. ಮೋಡ ಕವಿದ ವಾತಾವರಣವಿದ್ದು, ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿಯಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 15ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.