ಬೆಂಗಳೂರು: ಕಳೆದ ಎಡರು ದಿನದಿಂದ ರಾಜ್ಯದಲ್ಲಿ ಮಳೆ ಇದೆ. ನಿನ್ನೆ ಅಲ್ಲಲ್ಲಿ ಜೋರು ಮಲೆ, ಇನ್ನು ಕೆಲವು ಕಡೆ ತುಂತುರು ಮಳೆಯ ಅನುಭವವಾಗಿದೆ. ಇನ್ನು ಇಂದು ಬೆಳಗ್ಗೆಯಿಂದಾನೇ ಮೋಡ ಕವಿದ ವಾತಾವರಣವಿದ್ದು, ಸ್ವಲ್ಪ ಸಮಯ ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದೆ. ಇನ್ನು ಎರಡು ದಿನಗಳ ಕಾಲ ಅಂದ್ರೆ ನವೆಂಬರ್ 14ರ ತನಕ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ, ತುಮಕೂರು, ರಾಮನಗರ, ಹಾಸನ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರಕ್ಕೆ ಗುಡುಗು ಸಹಿತ ಮಳೆ ಬೀಳಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ 14ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.