ಬೆಂಗಳೂರು: ದಸರಾ ಹಬ್ಬಕ್ಕೆಂದು ಮೂರ್ನಾಲ್ಕು ದಿನಗಳ ಕಾಲ ಊರು ಸೇರಿದ್ದವರಿಗೆ ಇಂದು ಬೆಳಗ್ಗೆಯಿಂದ ಟ್ರಾಫಿಕ್ ಕಿರಿಕಿರಿ, ಮಳೆಯ ಸಮಸ್ಯೆಯೇ ತಲೆದೂರಿದೆ. ಬೆಳಗ್ಗೆಯಿಂದಾನೂ ಕೆಲ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಹೊರಗೆ ಹೋಗುವ ಜನರಿಗೆ ಜಿಟಿಜಿಟಿ ಮಳೆ ಅಡ್ಡಿಯಾಗುತ್ತಿದೆ. ಬೆಳಗ್ಗೆನೆ ಎಲ್ಲೆಡೆ ಕಲರ್ ಫುಲ್ ಕೊಡೆಗಳ ದರ್ಶನವೇ ಆಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ರಜೆ ಇದ್ದಿದ್ದರಿಂದ ಊರುಗಳಿಗೆ ತೆರಳಿದ್ದವರು ನಿನ್ನೆ ಸಂಜೆಯಿಂದಾನೂ ಪ್ರಯಾಣ ಮಾಡುತ್ತಲೇ ಇದ್ದಾರೆ. ಹೀಗಾಗಿ ಟ್ರಾಫಿಕ್ ನಲ್ಲಿ ಸಿಲುಕಿದವರು, ಗಾಡಿಗಳು ಮೂವ್ ಆಗುವುದಕ್ಕೇನೆ ಕಷ್ಟಪಟ್ಟಿವೆ.
ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಘೋಷಣೆ ಮಾಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ಟೋಬರ್17ರವರೆಗೂ ಕರಾವಳಿ ಹಾಗೂ ಕರಾವಳಿ ಜಿಲ್ಲೆಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚಿನ ಜೊತೆಗೆ ಜೋರಾದ ಮಳೆಯಾಗಲಿದೆ. ಹಾಗೇ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಭಾಗದಲ್ಲಿ ಚದುರಿದ ಮಳೆಯಾಗಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ಹಿರಗೆ ಹೋಗುವ ಜನರು ಎಚ್ಚರದಿಂದ ಇರಬೇಕು. ಆದರೆ ಈ ಸಮಯದಲ್ಲಿ ಮಳೆಯೇ ಹೆಚ್ಚು ಬೀಳುತ್ತಿರುವುದು ಕೆಲ ಭಾಗದ ರೈತರಿಗೆ ಸಂಕಷ್ಟ ಬಂದಂತೆ ಆಗಿದೆ. ಬೆಳೆ ಕೊಯ್ಲು ಕಟಾವಿಗೆ ಬಂದಿದ್ದು, ಮಳೆಯಿಂದಾಗಿ ಹಾಳಾಗುವ ಸಾಧ್ಯತೆ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











