ಚಿತ್ರದುರ್ಗ. ಜು.25: ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದ್ದು, ಮಳೆ ಅಭಾವ (Deficit) ಎದುರಾಗಿದೆ. ವಿಭಾಗದ ಒಟ್ಟು 57 ತಾಲೂಕುಗಳ ಪೈಕಿ 43 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ದಾಖಲಾಗಿದೆ. 37 ತಾಲೂಕುಗಳಲ್ಲಿ ಮಳೆ ವ್ಯತ್ಯಾಸ ಅಥವಾ ಸತತ 3 ವಾರಗಳಿಂದ ತೀವ್ರ ಒಣ ಹವೆ ಕಂಡುಬಂದಿದೆ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಹೇಳಿದರು.
ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯಲ್ಲಿ, ವಿಭಾಗದ ಮಳೆ ಅಭಾವ ಮತ್ತು ಬರ ಪರಿಸ್ಥಿತಿಯ ಕುರಿತು ವರದಿಯನ್ನು ಮಂಡಿಸಿದರು.
ಸದ್ಯದ ಅಂಕಿ-ಅಂಶಗಳು ಮತ್ತು ಇಂಪ್ಯಾಕ್ಟ್ ಸೂಚಕಗಳ ಪ್ರಕಾರ, ಬೆಂಗಳೂರು ವಿಭಾಗದ 36 ತಾಲೂಕುಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಜುಲೈ ವೇಳೆಗೆ ಈ ಸಂಖ್ಯೆ 100 ತಾಲೂಕುಗಳಿಗೆ ಏರಿಕೆಯಾಗುವ ಆತಂಕವಿದೆ ಎಂದರು.

57 ತಾಲೂಕುಗಳಲ್ಲಿಯೂ ಬಿತ್ತನೆ ಪ್ರಮಾಣ ಶೇ. 75 ಕ್ಕಿಂತ ಅತ್ಯಂತ ಕಡಿಮೆಯಾಗಿದೆ. 52 ತಾಲೂಕುಗಳಲ್ಲಿ ಮಣ್ಣಿನ ತೇವಾಂಶ (Soil Moisture) ತೀವ್ರವಾಗಿ ಕುಸಿದಿದ್ದು, ಇದರಲ್ಲಿ 28 ತಾಲೂಕುಗಳು ಭೀಕರ ತೇವಾಂಶ ಅಭಾವ ಎದುರಿಸುತ್ತಿವೆ. ಲಕ್ಷಾಂತರ ಹೆಕ್ಟೇರ್ ಪೈಕಿ ಕೇವಲ ಅಲ್ಪ ಪ್ರಮಾಣದ ಜಮೀನಿನಲ್ಲಿ ಮಾತ್ರ ಬಿತ್ತನೆಯಾಗಿದೆ. ಜಲಾಶಯಗಳ ನೀರಿನ ಮಟ್ಟ: ಪ್ರಮುಖ ಜಲಾಶಯಗಳಲ್ಲಿ ಒಟ್ಟು ಸಾಮರ್ಥ್ಯದ ಕೇವಲ 48% ಮಾತ್ರ ನೀರು ಲಭ್ಯವಿದೆ. ಜಲವಿದ್ಯುತ್ ಜಲಾಶಯಗಳಲ್ಲಿ ಶೇ.30, ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.54 ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಶೇ. 59% ನೀರಿದೆ.
ಮುಂಬರುವ 15 ದಿನಗಳಲ್ಲಿ ಹವಾಮಾನ ಇಲಾಖೆಯ (IMD) ಮುನ್ಸೂಚನೆಯಂತೆ ಸಾಧಾರಣ ಮಳೆಯಾದರೆ ಪರಿಸ್ಥಿತಿ ಸ್ವಲ್ಪ ಸುಧಾರಿಸಬಹುದು. ಇಲ್ಲದಿದ್ದರೆ ಆತಂಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಮನೋಜ್ ಕುಮಾರ್ ಮೀನಾ ಸಭೆಗೆ ಮಾಹಿತಿ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











