123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

1 Min Read

ಚಿತ್ರದುರ್ಗ, ಅ 6:  123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನಗರದ ಕವಾಡಿಗರಹಟ್ಟಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು NDRF ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು.

ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು.

ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಸವಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *