ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ. ಮಳೆರಾಯ ದರ್ಶನ ನೀಡಿದ್ದಾನೆ.
ಮಧ್ಯಾಹ್ನದಿಂದಾನೂ ಮೋಡ ಕವಿದ ವಾತಾವರಣವಿತ್ತು. 2 ಗಂಟೆಯಾಗುತ್ತಲೇ ಸಣ್ಣಗೆ ಶುರುವಾದ ಮಳೆ, ತಣ್ಣನೆಯ ಗಾಳಿಯೊಂದಿಗೆ ನಿಲ್ಲದೆ ಸುರಿಯುತ್ತಿದೆ. ಇದರಿಂದ ಬೆಂಗಳೂರಿನ ಮಂದಿ ಫುಲ್ ಖುಷಿಯಾಗಿದ್ದಾರೆ.
ಪ್ರತಿ ಸಲ ಮಳೆ ಬಂದಾಗಲೂ ಜನ ಇಷ್ಟೊಂದು ಖುಷಿ ಪಟ್ಟಿದ್ದು ಕಂಡಿಲ್ಲ. ಆದರೆ ಈ ಬಾರಿಯ ಬಿಸಿಲಿಗೆ ತಡೆಯಲಾರದೆ ಮಳೆಗಾಗಿ ಕಾಯುತ್ತಿದ್ದರು. ಮೊದಲ ಮಳೆಯಿಂದಾಗಿ ಜನ ಅದ್ಬುತ ಕಂಡಂತೆ ಫೀಲ್ ಮಾಡಿಕೊಳ್ಳುತ್ತಿದ್ದಾರೆ. ಇನ್ನು ನಾಲ್ಕೈದು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಮೆಜೆಸ್ಟಿಕ್, ಟೌನ್ ಹಾಲ್, ಮಾರ್ಜೆಟ್, ಹೆಬ್ಬಾಳ, ರಾಜಾಜಿನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಒಣ ಹವೆ ಕಡಿಮೆಯಾಗಿ ತಂಪಾದ ವಾತಾವರಣ ನಿರ್ಮಾಣವಾದರೆ ಸಾಕು ಎನ್ನುತ್ತಿದ್ದಾರೆ ಜನಗಳು. ಇಂದಿನಿಂದ ಮಳೆ ಶುರುವಾಗಿರುವುದರಿಂದ ಮಳೆ ಬರಲಿದೆ ಎಂಬ ನಂಬಿಕೆ ಉಂಟಾಗಿದೆ.
ಇದ್ದಕ್ಕಿದ್ದ ಹಾಗೇ ಮಳೆ ಬಂದ ಕಾರಣ ವಾಹನ ಸವಾರರು ಕೊಂಚ ತಬ್ಬಿಬ್ಬಾದರೂ. ಕೆಲವರು ಮಳೆಯಲ್ಲಿಯೇ ನೆನೆದುಕೊಂಡು, ಆ ಮಳೆಯ ಎಂಜಾಯ್ ಮಾಡಿಕೊಂಡು ಮುಂದೆ ಸಾಗಿದ್ದಾರೆ. ಇನ್ನು ಕೆಲವರು ಮಳೆಯಿಂದ ಒಂದು ಕಡೆ ನಿಂತು ಬಿಟ್ಟಿದ್ದಾರೆ. ಒಟ್ನಲ್ಲಿ ಬಿಸಿ ಬಿಸಿ ವಾತಾವರಣ ತಂಪಾಯ್ತಲ್ಲ, ಜನ ಫುಲ್ ಖುಷಿಯಾಗಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…