Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ 4 ದಿನ ರಾಜ್ಯಾದ್ಯಂತ ಮಳೆಯ ಆರ್ಭಟ : ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

---Advertisement---

ಸುದ್ದಿಒನ್,ಬೆಂಗಳೂರು,ಮೇ.22: ಇಂದಿನಿಂದ ಆರಂಭಿಸಿ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ಭರ್ಜರಿ ಮುಂಗಾರು ಪೂರ್ವ ಮಳೆಯಾಗಲಿದೆ. ಈ ವೇಳೆ ಜೋರಾದ ಬಿರುಗಾಳಿ, ಸಿಡಿಲು ಮತ್ತು ಗುಡುಗಿನ ಆರ್ಭಟವೂ ಇರಲಿದೆ ಎಂದು ಎಚ್ಚರಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ತುಮಕೂರು,ರಾಯಚೂರು,ಯಾದಗಿರಿ, ಕಲಬುರಗಿ,ಬೀದರ್ ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಡುಗು-ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಮಳೆಯ ಮುನ್ನೆಚ್ಚರಿಕೆಗಳನ್ನು ಪಾಲಿಸಲು ಕೋರಲಾಗಿದೆ.

Join WhatsApp

Join Now

Join Telegram

Join Now