ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನವೂ ಮಳೆ ಮುಂದುವರೆಯಲಿದೆ. ಹವಮಾನ ಇಲಾಖೆ ಮುನ್ಸೂಚನೆಯನ್ನ ಕೊಟ್ಟಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಲ್ಲೂ ಕೊಡಗು, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಜುಲೈ 31lರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಿದ್ದು, ಜುಲೈ 31ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 29ರವರೆಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗೂ ಭಾಗದಲ್ಲೂ ಜೋರಾದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಸೋಮವಾರದವರೆಗೆ ರಾಜ್ಯದ ಇತರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗುತ್ತದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗಬಹುದು ಎಂಬ ಮಾಹಿತಿ ನೀಡಲಾಗಿದೆ.
ಮಳೆಯಿಂದಾಗಿ ಹಲವೆಡೆ ಸಮಸ್ಯೆಗಳು ಜಾಸ್ತಿಯಾಗಿವೆ. ರಸ್ತೆಗಳ ಸಂಪರ್ಕ ಕಡಿತಗೊಂಡಿವೆ, ವಿದ್ಯುತ್ ಸಮಸ್ಯೆ ಎದುರಾಗಿವೆ. ಅಂಗಡಿಗಳಿಗೆ ನೀರು ನುಗ್ಗಿದೆ. ಹೀಗೆ ನಾನಾ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ ಹೊರಗೆ ಹೋಗುವವರು ಮಳೆಯಿಂದ ತಪ್ಪೊಸಿಕೊಳ್ಳುವುದಕ್ಕೆ ಮುಂಜಾಗ್ರತ ಕ್ರಮವನ್ನು ತೆಗೆದುಕೊಳ್ಳಿ. ಆರಂಭದಲ್ಲಿಯೇ ಚಳಿಯು ಜಾಸ್ತಿಯಾಗಿದೆ. ಮಳೆ ಚಳಿ ಎರಡು ಜಾಸ್ತಿ ಇರುವ ಕಾರಣ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಆರೋಗ್ಯದ ಬಗ್ಗೆಯೂ ಎಚ್ಚರವಹಿಸಬೇಕು.
