ನಾಳೆ ಶಿವಮೊಗ್ಗದಲ್ಲಿ ರೈತ ದಸರಾ : ಚಿತ್ರದುರ್ಗದ ಯುವ ರೈತ ಜ್ಞಾನೇಶ್ವರ ಕೆ.ಆರ್.ಉದ್ಘಾಟನೆ

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.17 : ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ರೈತ ದಸರಾವನ್ನು ಚಿತ್ರದುರ್ಗದ ಯುವ ರೈತ, ಸಾವಯವ ಕೃಷಿಕ
ಜ್ಞಾನೇಶ್ವರ ಕೆ.ಆರ್. ಅವರು ಉದ್ಗಾಟಿಸಲಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ, ರೈತ ದಸರಾ ಸಮಿತಿ-2023 ಕೃಷಿ ಹಾಗೂ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ಮಾಚೇನಹಳ್ಳಿ ಇವರ ಸಹಯೋಗದೊಂದಿಗೆ ಅಕ್ಟೋಬರ್ 18 ರ ಇಂದು ನಡೆಯುವ ರೈತ ದಸರಾದಲ್ಲಿ ಬೆಳಿಗ್ಗೆ 9 ಕ್ಕೆ ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜು ಸೈನ್ಸ್ ಮೈದಾನದಲ್ಲಿ ಜಾಥಾ ಉದ್ಘಾಟನೆಗೊಂಡ ನಂತರ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ರೈತ ಜ್ಞಾನೇಶ್ವರ ಅವರು ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯವರು. ಜಿಲ್ಲೆಯ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿದಗದಾರೆ. ಅವರ ತೋಟದಲ್ಲಿ ನಿಂಬೆ, ಹಲಸು, ಪಪ್ಪಾಯ, ದಾಳಿಂಬೆ, ಕರಿಬೇವು, ನುಗ್ಗೆ, ದಾಳಿಂಬೆ, ಮಾವು, ಬಾಳೆ ಮುಂತಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ದೇಸಿ ತಳಿಯ ಹಸುಗಳನ್ನು ಸಾಕಿ ಹೈನುಗಾರಿಕೆ ಮಾಡಿರುವುದು, ಜೇನು ಸಾಕಾಣಿಕೆ, ಸಾವಯವ ಕೃಷಿ ಪದ್ಧತಿಯ ಬಗ್ಗೆ ಸಾಕಷ್ಟು ಆಸಕ್ತಿ ಹೊಂದಿದ್ದು ರೈತರನ್ನು  ಸಮಾನ ಮನಸ್ಕ 25 ರಿಂದ 30 ರೈತರು ಒಂದೆಡೆ ಸೇರಿ, ಚಿತ್ರದುರ್ಗದ ಜೆ.ಸಿ.ಆರ್. ಬಡಾವಣೆಯ ಬಳಿ ಪ್ರತಿ ಭಾನುವಾರ ಸಾವಯವ ಸಂತೆ ಮಾಡುವುದು, ಗುಣಮಟ್ಟದ ಬೆಳೆಗಳನ್ನು ನಿಗದಿತ ದರದಲ್ಲೇ ಮಾರಾಟ ಮಾಡುವ ಮೂಲಕ ರೈತರಿಗೆ ಪ್ರೇರಣೆಯಾಗಿದ್ದಾರೆ. ಮತ್ತು ಜಿಲ್ಲೆಯ ಪ್ರಗತಿಪರ ರೈತ, ಉದಯೋನ್ಮುಖ ಕೃಷಿ ಪಂಡಿತ, ರಾಜ್ಯ ಪ್ರಶಸ್ತಿ ವಿಜೇತ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಭಾರತೀಯ ಕಿಸಾನ್ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದು ಅವರ ಸಹೋದರ ಕೆ.ಆರ್. ತಿಪ್ಪೇಸ್ವಾಮಿ, ಭಾರತೀಯ ಕಿಸಾನ್ ಸಂಘದ ಸದಸ್ಯರು ದೊಡ್ಡಸಿದ್ದವ್ವನಹಳ್ಳಿಯ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *