ಬೈ ಎಲೆಕ್ಷನ್ ಅಖಾಡಕ್ಕೆ ರಾಜಾಹುಲಿ ಎಂಟ್ರಿ..

suddionenews
1 Min Read

ಬೆಂಗಳೂರು: ರಾಜ್ಯದಲ್ಲಿನ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಧುಮುಕಲಿದ್ದಾರೆ.

ಈಗಾಗಲೇ ಮೂರು ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರಕ್ಕೆ ಧುಮುಕಿದ್ದು, ಇದೀಗಾ ಎರಡೂ ಕ್ಷೇತ್ರಗಳಲ್ಲಿ ತಲಾ ಎರಡು ದಿನ ಪಕ್ಷದ ಅಭ್ಯರ್ಥಿಗಳ ಪರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತಯಾಚಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಅಕ್ಟೋಬರ್ 18ರ ಸೋಮವಾರ ಮಧ್ಯಾಹ್ನ 2:30ಕ್ಕೆ ರಸ್ತೆ ಮಾರ್ಗದ ಮೂಲಕ ಚಿತ್ರದುರ್ಗಕ್ಕೆ ತೆರಳಲಿದ್ದಾರೆ. ಸಂಜೆ 6.30ಕ್ಕೆ ಬಸವ ಕೇಂದ್ರದಲ್ಲಿರುವ ಅನುಭವ ಮಂಟಪದಲ್ಲಿ ಆಯೋಜಿಸಲಾಗಿರುವ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಂದು ರಾತ್ರಿ ಶಿವಮೊಗ್ಗಕ್ಕೆ ತೆರಳಿಲಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್‌ 19ರ ಮಂಗಳವಾರ ಹೊನ್ನಾಳಿ ತಾಲೂಕಿನ ನ್ಯಾಮತಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ ಬೆಳಗ್ಗೆ 11 ಗಂಟೆಗೆ ಕೋವಿಡ್-19 ಕಾರ್ಯದಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಆಯೋಜಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ನಂತರ ಬಾಗಲಕೋಟೆಗೆ ತೆರಳಲಿದ್ದು, ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 20ರ ಬುಧವಾರ ಬೆಳಗ್ಗೆ 10.30ಕ್ಕೆ ಸಿಂದಗಿ ಉಪ ಚುನಾವಣಾ ಪ್ರಚಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಡೀ ದಿನ ಕ್ಷೇತ್ರದ ಹಲವು ಭಾಗದಲ್ಲಿ ಪಕ್ಷ ಆಯೋಜಿಸಿರುವ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಅಂದು ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 21ರ ಗುರುವಾರ ಮತ್ತೆ ಸಿಂದಗಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಡೀ ದಿನ ಕ್ಷೇತ್ರದಲ್ಲಿ ನಡೆಯುವ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಅಕ್ಟೋಬರ್ 22ರ ಶುಕ್ರವಾರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹಾನಗಲ್ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಅಂದು ರಾತ್ರಿ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.ಅಕ್ಟೋಬರ್ 23ರ ಶನಿವಾರದಂದು ಬೆಳಗ್ಗೆ 10 ರಿಂದ ಸಂಜೆ 6ಗಂಟೆವರೆಗೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂದು ರಾತ್ರಿ ಶಿಕಾರಿಪುರಕ್ಕೆ ಮರಳಿ ವಾಸ್ತವ್ಯ ಹೂಡಲಿದ್ದು, ಅಕ್ಟೋಬರ್ 24ರ ಭಾನುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *