Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಚಿವ ಸ್ಥಾನದಿಂದ ಕೈ ಬಿಟ್ರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ತಮ್ಮದಾಗಿಸಿಕೊಂಡ ರಾಜಣ್ಣ..!

---Advertisement---

 

ತುಮಕೂರು: ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರೀ ಸಾಕಷ್ಟು ಪೈಪೋಟಿ ಇತ್ತು. ಗುಬ್ಬಿ ಶ್ರೀನಿವಾಸ್ ಅವರು ಈ ಬಾರಿ ಹೇಗಾದ್ರೂ ಮಾಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನವನ್ನ ತಮ್ಮವರ ಪರ ಮಾಡಿಕೊಳ್ಳಬೇಕೆಂಬ ಹಠ ಹೊಂದಿದ್ದರು. ಮತಗಳ್ಳತನ ಬಗ್ಗೆ ರಾಜಣ್ಣ ಮಾತನಾಡಿದ್ದರ ಪರಿಣಾಮ, ಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು. ಹೀಗಾಗಿ ತುಮಕೂರಿನಲ್ಲಿ ಹಿಡಿತ ತಪ್ಪಬಹುದು ಎಂದೇ ಹಲವರು ನಿರೀಕ್ಷೆ ಮಾಡಿಕೊಂಡಿದ್ದರು. ಆದರೆ ಈಗ ನೋಡಿದ್ರೆ ಎಲ್ಲಾ ಆಲೋಚನೆಗಳು ಉಲ್ಟಾ ಹೊಡೆದಿದ್ದು, ಮತ್ತೆ ರಾಜಣ್ಣ ಅವರೇ ಮೇಲು ಗೈ ಸಾಧಿಸಿದ್ದಾರೆ.

ಇಂದು ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಒಬ್ಬರೆ ಅರ್ಜಿ ಸಲ್ಲಿಕೆ ಮಾಡಿದ್ದರು. ಹೀಗಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ 6 ಅವಧಿಗೆ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣ ಆಯ್ಕೆಯಾಗಿದ್ದರು.‌ ಸಚಿವ ಸ್ಥಾನ ಕಳೆದುಕೊಂಡ ಬಳಿಕವೂ ಸತತ ಏಳನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕೆ.ಎನ್.ರಾಜಣ್ಣ ಕೆಎನ್ ರಾಜಣ್ಣ ಹೊಸ ದಾಖಲೆ ನಿರ್ಮಿಸಿದ್ದಾರೆ.

ತುಮಕೂರು ಜಿಲ್ಲೆಯ ಎಲ್ಲಾ 10 ತಾಲೂಕುಗಳಲ್ಲೂ ಕೆ.ಎನ್.ರಾಜಣ್ಣ ಅವರ ಬೆಂಬಲಿಗರ ಪಡೆ ಇದೆ. 14 ನಿರ್ದರೆಶಕ ಸ್ಥಾನಕ್ಕರ ಚುನಾವಣೆ ನಡೆದಿತ್ತು. 8 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ತಿಪಟೂರು ತಾಲೂಕಿನಿಂದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಹಾಗೂ ಪಾವಗೆ ತಾಲೂಕಿನಿಂದ ಕಾಂಗ್ರೆಸ್ ಶಾಸಕ ವೆಂಕಟೇಶ್ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ ರಾಜಣ್ಣ ಅವರ ಬೆಂಬಲಿಗರೇ ಆಯ್ಕೆಯಾಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...