Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಾವೀರ ಮದಕರಿನಾಯಕರ ಜಯಂತ್ಯೋತ್ಸವ : ಅದ್ದೂರಿ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಾಡ ದೊರೆ ರಾಜಾವೀರ ಮದಕರಿನಾಯಕರ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾ ನಾಯಕ ಸಮಾಜದ ವತಿಯಿಂದ ಸೋಮವಾರ ನಗರದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.

ಹೊಳಲ್ಕೆರೆ ರಸ್ತೆ ಕನಕ ವೃತ್ತದಿಂದ ಹೊರಟ ಮೆರವಣಿಗೆಯನ್ನು ಪ್ರಸನ್ನಾನಂದಸ್ವಾಮೀಜಿ, ಮಾಜಿ ಸಚಿವ ಶ್ರೀರಾಮುಲು, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಇವರುಗಳು ಉದ್ಗಾಟಿಸಿದರು.

ಡೊಳ್ಳು, ತಮಟೆ, ಉರುಮೆ, ಕಹಳೆ ವಾದ್ಯ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು. ಮೆರವಣಿಗೆಯುದ್ದಕ್ಕೂ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ರಾಜವೀರ ಮದಕರಿನಾಯಕನ ಬೃಹತ್ ಫೋಟೋ, ಮದವೇರಿದ ಆನೆಯನ್ನು ಮದಕರಿನಾಯಕ ಮದವಡಗಿಸುತ್ತಿರುವ ಸ್ಥಬ್ತ ಚಿತ್ರ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.
ವಾಲ್ಮೀಕಿ ಭವನದ ಮುಂಭಾಗವಿರುವ ಮದಕರಿನಾಯಕನ ಪ್ರತಿಮೆಯನ್ನು ವರ್ಣರಂಜಿತವಾಗಿ ಅಲಂಕರಿಸಿ ವಿದ್ಯುತ್ ದೀಪಗಳಿಂದ ಜಗಮಗಿಸುವಂತೆ ಸಿಂಗರಿಸಲಾಗಿತ್ತು.
ಕನಕದಾಸ, ಸಂಗೊಳ್ಳಿರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರವನಿತೆ ಒನಕೆ ಓಬವ್ವ ಪ್ರತಿಮೆಗಳನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಿ ರಸ್ತೆಯುದ್ದಕ್ಕೂ ಬಾಳೆಕಂಬಗಳನ್ನು ಕಟ್ಟಲಾಗಿತ್ತು.
ಮೆರವಣಿಗೆ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಬಾರದೆಂದು ಅಲ್ಲಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನಿಟ್ಟು ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮೇದಾರ ಕೇತೇಶ್ವರಸ್ವಾಮೀಜಿ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮಂಜುನಾಥ್, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್ ಸೇರಿದಂತೆ ನಾಯಕ ಸಮಾಜದ ಅನೇಕ ಮುಖಂಡರುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...