Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 1 ರಂದು ರಾಜವೀರ ಮದಕರಿನಾಯಕರ 270 ನೇ ಪಟ್ಟಾಭಿಷೇಕ : ದೊರೆಗೆ ಗೌರವ ಸಲ್ಲಿಸುವುದು ಎಲ್ಲರ ಜವಾಬ್ದಾರಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.29  : ಐತಿಹಾಸಿಕ ಚಿತ್ರದುರ್ಗದ ಏಳು ಸುತ್ತಿನ ಕೋಟೆ ಆಳಿದ ರಾಜವೀರ ಮದಕರಿನಾಯಕರ 270 ನೇ ಪಟ್ಟಾಭಿಷೇಕವನ್ನು ಜುಲೈ 1 ರಂದು ವಿಜೃಂಭಣೆಯಿಂದ ಆಚರಿಸಲಾಗುವುದೆಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 11 ಕ್ಕೆ ಮದಕರಿನಾಯಕನ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು.
12 ಗಂಟೆಗೆ ತ.ರಾ.ಸು.ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದು, ಶಾಸಕರು, ಸಚಿವರು, ನಾಯಕ ಸಮಾಜದ ಮುಖಂಡರುಗಳು ಆಗಮಿಸಲಿದ್ದಾರೆ. ಎಲ್ಲಾ ಜಾತಿ ಧರ್ಮದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಕಾಂತರಾಜ್ ಮನವಿ ಮಾಡಿದರು.

ಥೀಂ ಪಾರ್ಕ್, ಕೋಟೆ ಅಭಿವೃದ್ದಿ ಬಗ್ಗೆ ಸಚಿವರು, ಶಾಸಕರುಗಳಿಗೆ ಮನವಿ ಸಲ್ಲಿಸಲಾಗುವುದು. ಚಿತ್ರದುರ್ಗಕ್ಕೆ ಮದಕರಿನಾಯಕ ತನ್ನದೆ ಆದ ಕೊಡುಗೆ ಕೊಟ್ಟಿದ್ದಾರೆ. ಅದಕ್ಕೆ ಸೂಕ್ತ ಗೌರವ, ಸ್ಥಾನಮಾನ ಸಿಗುತ್ತಿಲ್ಲ. ಮದಕರಿನಾಯಕನ ಹೆಸರು ಬೆಳೆದರೆ ಊರು ಬೆಳೆದಂತೆ. ಇಲ್ಲಿವರೆಗೂ ಅಧಿಕಾರ ನಡೆಸಿದ ಯಾವ ರಾಜಕಾರಣಿಗಳಿಗೂ ಊರು ಅಭಿವೃದ್ದಿಯಾಗುವುದು ಬೇಕಾಗಿಲ್ಲ. ಹನ್ನೆರಡನೆ ವರ್ಷಕ್ಕೆ ಪಟ್ಟಕ್ಕೇರಿದ ಮದಕರಿನಾಯಕನ ಅನೇಕ ವಿಚಾರಗಳು ಬೆಳಕಿಗೆ ಬರಬೇಕಿದೆ. ಹಾಗಾಗಿ ನಾಯಕ ಜನಾಂಗದಿಂದ ಪಟ್ಟಾಭಿಷೇಕ, ಜಯಂತಿ, ಸ್ಮರಣೋತ್ಸವವನ್ನು ಆಚರಿಸುವುದು ನಮ್ಮ ಧರ್ಮ ಎಂದು ಹೇಳಿದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ಎಲ್ಲಾ ಮಹಾನ್ ನಾಯಕರುಗಳನ್ನು ಒಂದೊಂದು ಜಾತಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸರ್ವಧರ್ಮದವರು ಮದಕರಿನಾಯಕನ ಪಟ್ಟಾಭಿಷೇಕದಲ್ಲಿ ಭಾಗವಹಿಸಿದರೆ ಒಳ್ಳೆಯದು. ಏಕೆಂದರೆ ಮದಕರಿನಾಯಕ ಕೇವಲ ನಾಯಕ ಜನಾಂಗಕ್ಕೆ ಸೀಮಿತವಲ್ಲ. ಊರಿನ ದೊರೆಗೆ ಗೌರವ ಸಲ್ಲಿಸುವುದು ಎಲ್ಲರ ಜವಾಬ್ದಾರಿ ಎಂದರು.

ನಾಯಕ ಸಮಾಜದ ಮುಖಂಡ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ ಪಟ್ಟಾಭಿಷೇಕದ ಮೂಲಕ ಮದಕರಿನಾಯಕನ ಇತಿಹಾಸ ಪರಂಪರೆಯನ್ನು ಎಲ್ಲರಿಗೂ ತಿಳಿಸಬೇಕಿದೆ. ಚಿತ್ರದುರ್ಗದ ಕೋಟೆಯನ್ನು ವಿಶ್ವಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಂಬಂಧ ವೇದಿಕೆ ಕಾರ್ಯಕ್ರಮದಲ್ಲಿ ಬಿ.ಕಾಂತರಾಜ್‍ರವರು ಸಚಿವರು ಶಾಸಕರುಗಳಿಗೆ ಮನವಿ ಅರ್ಪಿಸಲಿದ್ದಾರೆಂದು ತಿಳಿಸಿದರು.
ಹೆಚ್.ಅಂಜಿನಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಮಾಜಿ ಸದಸ್ಯ ತಿಪ್ಪೇಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 15ರಿಂದ ಆರಂಭವಾಗಲಿದೆ ಮುಂಗಾರು ಅಧಿವೇಶನ : ವಿಪಕ್ಷಗಳ ಫ್ಲ್ಯಾನ್ ಏನು..?

ಬೆಂಗಳೂರು: ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15 ರಿಂದ ಜುಲೈ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಈ

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

error: Content is protected !!