ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಸಹಾಯಕರಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕಗೊಂಡಿದ್ದಾರೆ. ಕಾನೂನು ಮಾಪಕ ಶಾಸ್ತ್ರ ಇಲಾಖೆಯ ನಿಯಂತ್ರಕರಾಗಿದ್ದರು ರಾಜೇಂದ್ರ ಪ್ರಸಾದ್. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಸಹಾಯಕರಾಗಿ ನೇಮಕಗೊಂಡಿದ್ದಾರೆ.
ಇತ್ತಿಚೆಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಆಪ್ತ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ. ಕೆಎಎಸ್ ಅಧಿಕಾರಿ ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಅಧಿಕಾರಿಯನ್ನಾಗಿ ಎಂ ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ ವಿ ಪ್ರಭಾಕರ್ ಹಾಗೂ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ.
ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ. ಈಗ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಾಜೇಂದ್ರ ಪ್ರಸಾದ್ ಅವರ ನೇಮಕ ಮಾಡಲಾಗಿದೆ.