Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಜನೀಕಾಂತ್ ಪ್ರಯತ್ನ ವಿಫಲ : ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಐಶ್ವರ್ಯಾ-ಧನುಶ್

---Advertisement---

ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ಅಳಿಯ ಮತ್ತು ಮಗಳು ತಮ್ಮ ದಾಂಪತ್ಯವನ್ನು ಜೀವನವನ್ನು ಕೊನೆಗೂ ಅಂತ್ಯ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆಯೇ ಡಿವೋರ್ಸ್ ಪಡೆಯಲು ಮುಂದಾಗಿದ್ದರು. ಆದರೆ ಮಗಳ ಸಂಸಾರವನ್ನು ಮತ್ತೆ ಸರಿ ಮಾಡುವುದಕ್ಕೆ ರಜನೀಕಾಂತ್ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅಳಿಯ ಹಾಗೂ ಮಗಳು ಇಬ್ಬರಿಗೂ ಬುದ್ದಿವಾದ ಹೇಳಿದ್ದರು. ಯಾವುದು ಕೂಡ ಪ್ರಯೋಜನವಾಗಿಲ್ಲ. ಇಬ್ಬರು ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಗಂಡ-ಹೆಂಡತಿ ಬೇರೆ ಬೇರೆ ವಾಸವಾಗಿದ್ದಾರೆ. ಮಕ್ಕಳಿಗೋಸ್ಕರ ಇಬ್ಬರು ಒಂದಾಗುತ್ತಾರೆ ಎಂದೇ ನಂಬಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಎಷ್ಟೇ ಮನವರಿಕೆ ಮಾಡಿದರು ಪ್ರಯೋಜನವಾಗಿಲ್ಲ. ಸುಮಾರು 18 ವರ್ಷದ ಪ್ರೀತಿಯನ್ನು ಕಳೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಚೆನ್ನೈನ ಫ್ಯಾಮಿಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

 

ನಟ ಧನುಷ್ ಮತ್ತು ಐಶ್ವರ್ಯಾ 2004ರಲ್ಲಿ ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳು ಕೂಡ ಇದ್ದಾರೆ. ಮಕ್ಕಳಿಗಾಗಿ ಪ್ರತ್ಯೇಕವಾದ ಮೇಲೂ ಇಬ್ಬರು ಆಗಾಗ ಒಟ್ಟಿಗೆ ಕಾಣಿಸಿಕೊಳ್ತಿದ್ರು. ಶಾಲಾ ಕಾರ್ಯಕ್ರಮಗಳಿಗೆ ಹೋಗುತ್ತಿದ್ದರು. ಆಗಾಗ ಭೇಟಿಯಾಗಿ ಸ್ನೇಹಿತರಂತೆ ಇದ್ದರು. ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾದರು. ಇದರ ಮಧ್ಯೆ ಧನುಷ್, ಐಶ್ವರ್ಯಾ ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment