ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಹೊಸ ವರ್ಷಕ್ಕೆ ಪಕ್ಷ ಘೋಷಿಸುವುದಾಗಿಯೂ ತಿಳಿಸಿದ್ದರು. ಆದರೆ ಇದೀಗ ಅವ್ರು ರಾಜಕೀಯದಿಂದ ಹಿಂದೆ ಸರಿದು ಮಹತ್ವದ ಘೋಷಣೆ ಮಾಡಿದ್ದಾರೆ. ಮತ್ತು ಪ್ರಸ್ತುತ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
— Rajinikanth (@rajinikanth) December 29, 2020
ಕಳೆದ ಎರಡು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಈ ರೀತಿ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ರಕ್ದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ರಜನಿಕಾಂತ್ ಆಸ್ಪತ್ರೆಗೆ ಅಡ್ಮಿಟ್ ಆಗಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ರೆಸ್ಟ್ ನಲ್ಲಿರುವ ರಜನಿಕಾಂತ್ ಸದ್ಯಕ್ಕೆ ರಾಜಕೀಯದಿಂದ ದೂರ ಇರಲು ನಿರ್ಧರಿಸಿದ್ದಾರೆ.
ತಮಿಳುನಾಡಿನಲ್ಲಿ ವಿಧಾನಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳು ಗರಿಗೆದರಿವೆ. ಅದರಲ್ಲಿ ಈ ಬಾರಿ ರಜನಿಕಾಂತ್ ಹೊಸ ಪಕ್ಷ ಕಟ್ಟಲು ಹೊರಟ ವಿಚಾರ ಭಾರಿ ಸದ್ದು ಮಾಡಿತ್ತು. ಈಗಾಗಲೇ ತಮಿಳುನಾಡು ಅಖಾಡಕ್ಕೆ ಅಣ್ಣಾಮಲೈ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಅನಾರೋಗ್ಯದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ. ರಾಜಕೀಯಕ್ಕೆ ಬರದೇ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಜನಿಕಾಂತ್ ಟ್ವಿಟರ್ನಲ್ಲಿ ಮೂರು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.
