Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್‍ಕುಮಾರ್ ಅಪಹರಣ ಕೇಸ್ : ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

---Advertisement---

ಡಾ.ರಾಜ್‍ಕುಮಾರ್ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನೇ ಎತ್ತಿಹಿಡಿದಿದೆ. ತಮಿಳು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ತಿರಸ್ಕಾರ ಮಾಡಿದೆ. 2000ನೇ ಇಸವಿಯಲ್ಲಿ ಈ ಘಟನೆ ನಡೆದಿತ್ತು. ಕಾಡುಗಳ್ಳ ವೀರಪ್ಪನ್ ಸೇರಿದಂತೆ 9 ಜನರನ್ನ ಖುಲಾಸೆಗೊಳಿಸಿ, ಕೆಳ ನ್ಯಾಯಾಲಯ ತೀರ್ಪನ್ನ ನೀಡಿತ್ತು. ಆ ತೀರ್ಪನ್ನ ಪ್ರಶ್ನಿಸಿ, ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಕೆ ಮಾಡಿತ್ತು.

ಮದ್ರಾಸ್ ಹೈಕೋರ್ಟ್ ಇಂದು ಆ ಅರ್ಜಿಯನ್ನು ವಜಾ ಮಾಡಿದೆ. 2018ರಲ್ಲಿ ಗೋಪಿಶೆಟ್ಟಿಪಾಳ್ಯದ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನ ಹೈಕೋರ್ಟ್ ಎತ್ತಿ ಹಿಡಿದಂತಾಗಿದೆ. ನ್ಯಾಯಮೂರ್ತಿಗಳಾದ ಪಿ.ಮೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರನ್ನೊಳಗೊಂಎ ವಿಭಾಗೀಯ ಪೀಠವು ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ. 2000ನೇ ಇಸವಿಯ ಜುಕೈ 30ರಂದು ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ದೊಡ್ಡಗಾಜನೂರಿನಲ್ಲಿ ಇರುವ ತಮ್ಮ ಫಾರ್ಮ್ ಹೌಸ್ ನಲ್ಲಿ ತಂಗಿದ್ದ ಡಾ.ರಾಜ್‍ಕುಮಾರ್ ಅವರನ್ನು ವೀರಪ್ಪನ್ ಮತ್ತು ಆತನ ತಂಡ ಅಪಹರಿಸಿತ್ತು. ಸುಮಾರು 108 ದಿನಗಳ ಕಾಲ ಅವರನ್ನು ಅರಣ್ಯದಲ್ಲಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು. ಈ ಘಟನೆಯು ಅಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ವೀರಪ್ಪನ್ ಸೇರಿದಂತೆ ಒಟ್ಟು 14 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಆದರೆ, 2004ರಲ್ಲಿ ವೀರಪ್ಪನ್, ಸೇತುಕುಳಿ ಗೋವಿಂದನ್, ಚಂದ್ರಗೌಡ ಮತ್ತು ಸೇತುಮಣಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದರು.

 

ಮತ್ತೊಬ್ಬ ಆರೋಪಿ ರಮೇಶ್ ಎಂಬಾತ ಇದುವರೆಗೂ ಪತ್ತೆಯಾಗಿಲ್ಲ. ಉಳಿದ 9 ಮಂದಿಯಾದ ಗೋವಿಂದರಾಜ್, ಅಂದ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಾಲ್ಮಂದಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ಸುದೀರ್ಘ 18 ವರ್ಷಗಳ ಕಾಲ ವಿಚಾರಣೆ ನಡೆದಿತ್ತು. ಇದೀಗ ಮದ್ರಾಸ್ ಹೈಕೋರ್ಟ್ ಕೂಡ ಆರೋಪಿಗಳನ್ನ ಖುಲಾಸೆಗೊಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...