ರಾಜ್ಯಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

 

ಬೆಂಗಳೂರು: ಜೂನ್ 10 ರಂದು ಬೆಳಗ್ಗೆ 10 ಗಂಟೆಯಿಂದ ರಾಜ್ಯಸಭಾ ಚುನಾವಣೆ ನಡೆಯಲಿದೆ. ವಿಧಾ‌ನಸೌಧದ ಮೊದಲನೇ‌ಮಹಡಿಯಲ್ಲಿರುವ 106 ನೇ ಕೊಠಡಿಯಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ವಿಪ್ ಜಾರಿ ಮಾಡಿದೆ.

ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡಲೇಬೇಕೆಂದು ಗುರುವಾರವೇ ವಿಪ್ ಜಾರಿ ಮಾಡಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಅದರಲ್ಲಿ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಸ್ಪರ್ಧೆ ನಡೆಸಿದ್ದು, ಅಭ್ಯರ್ಥಿಗಳನ್ನು ಹಾಕಿದೆ.

ಮೊದಲ ಅಭ್ಯರ್ಥಿ ಜೈರಾಂ ರಮೇಶ್ ಮತ್ತು ಎರಡನೇ ಅಭ್ಯರ್ಥಿ ಮನ್ಸೂರ್ ಖಾನ್ ಅವರನ್ನು ಹಾಕಲಾಗಿದೆ. ಎರಡನೇ ಅಭ್ಯರ್ಥಿಯನ್ನು ಹಿಂಪಡೆಯಲು ಜೆಡಿಎಸ್ ಸಾಕಷ್ಟು ಕಸರತ್ತು ನಡೆಸಿದ್ದರು, ಎರಡನೇ ಅಭ್ಯರ್ಥಿ ಕಣದಲ್ಲಿಯೇ ಇದ್ದಾರೆ. ಕಾಂಗ್ರೆಸ್ ಒಳಗೇನೆ ಎರಡನೇ ಅಭ್ಯರ್ಥಿ ಪರ ಅಪಸ್ವರ ಕೇಳಿ ಬಂದಿದೆ. ಕೆಲವರು ಪರೋಕ್ಷವಾಗಿ ಜೆಡಿಎಸ್ ಬೆಂಬಲ ಸೂಚಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮನ್ಸೂರ್ ಖಾನ್ ಗೆಲುವು ಅನುಮಾನವಿದ್ದರು, ಜೈರಾಂ ರಮೇಶ್ ಗೆಲುವು ಖಚಿತವಾಗಿದೆ.

ಕುಪೇಂದ್ರ ರೆಡ್ಡಿಯವರ ಮಾತಿನ ಮೇಲೆ ಕಾಂಗ್ರೆಸ್ ಮತಗಳು ಛಿದ್ರವಾಗುವ ಸಾಧ್ಯತೆಯೂ ಇದೆ. ಜೂನ್ 10 ರಂದೇ ಚುನಾವಣೆ ನಡೆದು ಅಂದೇ ಫಲಿತಾಂಶವು ಹೊರಬೀಳಲಿದೆ. ಹೀಗಾಗಿ ಒಂದೇ ದಿನದಲ್ಲಿ ಶಾಸಕರ ಒಲವು ತಿಳಿಯಲಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago