Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಆಡಳಿತ ಮಾಡಲು ಬರುವುದಿಲ್ಲ: ರಾಮಲಿಂಗ ರೆಡ್ಡಿ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು ಲೆಕ್ಕಕ್ಕೆ ಸಿಗದ ದುಸ್ಥಿತಿಗೆ ತಲುಪಿವೆ. 2008ರಿಂದ 2013ರವರೆಗೆ ಅಧಿಕಾರ ಮಾಡಿದ್ದ ಬಿಜೆಪಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬೀಳಿಸಿತ್ತು. 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾನು ಬೆಂಗಳೂರು ಉಸ್ತುವಾರಿಯಾದ ನಂತರ ನಾವು ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಿಸಿದ್ದೆವು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗ ರೆಡ್ಡಿ ಹೇಳಿದರು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಅವರು ಮತ್ತೆ ಅಧಿಕಾರಕ್ಕೆ ಬಂದ ನಂತರ ರಸ್ತೆಗಳು ಮತ್ತೇ ದುಸ್ಥಿತಿ ತಲುಪಿವೆ. ಅವರಿಗೆ ಆಡಳಿತ ಮಾಡಲು ಬರುವುದಿಲ್ಲ. ಬೆಂಗಳೂರಿನ ರಸ್ತೆ ಸ್ಥಿತಿ ಕಂಡು ಹೈಕೋರ್ಟ್ ಚಿಮಾರಿ ಹಾಕುವಂತಾಗಿದೆ. ನಮ್ಮ ಸರ್ಕಾರ ಇದ್ದಾಗ ರಸ್ತೆಗುಂಡಿಗಳು ಇದ್ದವು ಆದರೆ ಈ ರೀತಿ ಹೈಕೋರ್ಟ್ ನಿಂದ ಛಿಮಾರಿ ಹಾಕಿಸಿಕೊಳ್ಳುವ ಸ್ಥಿತಿಗೆ ಹೋಗಿರಲಿಲ್ಲ. ಆಗಿದ್ದಾಗೆ ನಾವು ಗುಡಿ ಮುಚ್ಚಿಸುತ್ತಿದ್ದೆವು..

ಈಗ ರಸ್ತೆಗುಂಡಿಯಿಂದ ಅಪಘಾತ ಹೆಚ್ಚಾಗಿದ್ದು, ಜನ ಸಾಯುತ್ತಿದ್ದಾರೆ, ಗಾಯಗೊಳ್ಳುತ್ತಿದ್ದಾರೆ. ಜನ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಪಾಲಿಕೆ ಆಯುಕ್ತರು, ಸಚಿವ ಆರ್.ಅಶೋಕ್ ಸೇರಿದಂತೆ ಹಲವರು ಗುಂಡಿ ಮುಚ್ಚಲು ಗಡುವು ಕೊಟ್ಟರೂ ಇದುವರೆಗೂ ಗುಂಡಿಗಳು ಮುಚ್ಚಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದು 2 ವರ್ಷ 5 ತಿಂಗಳಾಗಿವೆ ಈ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿ ಕಡೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ನಮ್ಮ ಸರ್ಕಾರ ಇದ್ದಾಗ ಬೆಂಗಳೂರಿನ ರಸ್ತೆಗಳಿಗೆ ವಿಶೇಷ ಒತ್ತು ನೀಡಿದ್ದೆವು. ಉತ್ತಮ ಗುಣಮಟ್ಟದ ರಸ್ತೆ ನೀಡಬೇಕು ಎಂಬ ಉದ್ದೇಶದಿಂದ ನಾವು ಕಾಂಕ್ರೀಟ್ ರಸ್ತೆ ಮಾಡಲು ಮುಂದಾಗಿದ್ದೆವು. ಆದರೆ ಬಿಜೆಪಿಯವರು ಅದರಲ್ಲಿ ಅಕ್ರಮ ನಡೆದಿದೆ ಎಂದು ಬೊಬ್ಬೆ ಹಾಕಿದರು. ನಂತರ ತನಿಖಾ ಸಮಿತಿ ಯಾವುದೇ ಅಕ್ರಮ ಇಲ್ಲ ಎಂದು ವರದಿ ಕೊಟ್ಟಿದೆ. ಬಿಜೆಪಿ ಕೇವಲ ದೂರುವುದಷ್ಟೇ ಗೊತ್ತು. ಅವರಿಗೆ ಅಭಿವೃದ್ಧಿ ಕೆಲಸ ಮಾಡುವುದು ಗೊತ್ತಿಲ್ಲ.

ಬೆಂಗಳೂರಿನಲ್ಲಿ 7 ಸಚಿವರಿದ್ದಾರೆ, ಅವರ ಕೈಯಲ್ಲಿ ಈ ನಗರದ ನಿರ್ವಹಣೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳೇ ಬೆಂಗಳೂರು ಉಸ್ತುವಾರಿಯನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಈ ಜವಾಬ್ದಾರಿ ತಾವೇ ಇಟ್ಟುಕೊಂಡ ಮೇಲೆ ಅವರು ಸಿಟಿ ರೌಂಡ್ ಹಾಕಬೇಕು. ಎಲ್ಲಿ ಏನೇನು ಸಮಸ್ಯೆ ಇದೆ ಎಂದು ಪರಿಶೀಲನೆ ನಡೆಸಬೇಕು. ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ವಾರಕ್ಕೆ 3 ದಿನ ಸಿಟಿ ರೌಂಡ್ ಹಾಕುತ್ತಿದ್ದೆ. ಎಲ್ಲೆ ಸಮಸ್ಯೆ ಇದ್ದರೂ ಒಂದು ವಾರದ ಒಳಗಾಗಿ ಸರಿ ಪಡೆಸುವಂತೆ ನೋಡಿಕೊಳ್ಳುತ್ತಿದ್ದೆ.

ಈಗ ಬೆಂಗಳೂರಿನಲ್ಲಿ ಹೇಳುವವರು ಕೇಳುವವರು ಇಲ್ಲದಂತಾಗಿದೆ. ಇತ್ತೀಚೆಗೆ ಅತಿಯಾದ ಮಳೆ ಸುರಿದಾಗ ಸಚಿವರು ತಮ್ಮ ಕ್ಷೇತ್ರ ಬಿಟ್ಟು ಹೊರಬರಲೇ ಇಲ್ಲ. ಅವರು ತಮ್ಮ ಕ್ಷೇತ್ರಕ್ಕೆ ಮಾತ್ರ ಸಚಿವರಾಗಿದ್ದಾರೆ ಎಂದು ಭಾವಿಸಿದಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಮಳೆ ಹಾನಿ ವೀಕ್ಷಣೆಗೆ ಎಂದು ಹೋಗಿ 2 ರಸ್ತೆ ನೋಡಿ, ಮಡಿವಾಳ ಕೆರೆ ನೋಡಿ ಎರಡೂವರೆ ಗಂಟೆಗಳಲ್ಲಿ ತಮ್ಮ ಪರಿಶೀಲನೆ ಮುಗಿಸಿ ಮನೆಗೆ ಹೋಗುತ್ತಾರೆ. ಈ ರೀತಿ ಬೇಜವಾಬ್ದಾರಿಯಾಗಿದ್ದರೆ ಬೆಂಗಳೂರಿನ ರಸ್ತೆಗಳು ಗುಂಡಿ ಬೀಳದೇ ಇರುತ್ತದಾ? ಜಿಲ್ಲಾ ಉಸ್ತುವಾರಿಗಳು ಆದೇಶ ನೀಡಿದರೆ 48 ಗಂಟೆಗಳಲ್ಲಿ ರಸ್ತೆ ಮುಚ್ಚಿಸಬಹುದು. ಇವರು ಬೆಂಗಳೂರು ನಗರ ನಿರ್ವಹಣೆ ಮಾಡಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಲಿ. ನಮಗೆ ಅಧಿಕಾರ ನೀಡಲಿ. ಮುಖ್ಯಮಂತ್ರಿಗಳು ಉಸ್ತುವಾರಿ ಹೊತ್ತಿದ್ದರೂ 1 ವಾರದಲ್ಲಿ ರಸ್ತೆ ಗುಂಡಿ ಮುಚ್ಚಲಿಲ್ಲ ಎಂದರೆ ಇವರು ಯಾವ ಪುರುಷಾರ್ಥಕ್ಕೆ ಸರ್ಕಾರ ನಡೆಸುತ್ತಿದ್ದಾರೆ?

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ 6 ಸಾವಿರ ಹಾಗೂ ಕುಮಾರಸ್ವಾಮಿ ಅವರು 1 ಸಾವಿರ ಕೋಟಿ ಕೊಟ್ಟಿದ್ದರು.ಒಟ್ಟು 7 ಸಾವಿರ ಕೋಟಿ ನೀಡಲಾಗಿತ್ತು. ಇದು ಹೊರತಾಗಿ ಕಳೆದ ಎರಡೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. 2019-20 ಸಾಲಿನಲ್ಲಿ ಬಿಬಿಎಂಪಿಯ 198 ವಾರ್ಡ ಗಳಿಗೆ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. 2020-21ರಲ್ಲಿ ಬಿಬಿಎಂಪಿಯಿಂದ ಪ್ರತಿ ವಾರ್ಡಿಗೆ 60 ಲಕ್ಷ ಘೋಷಿಸಿದ್ದು, ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಅನುದಾನ ನೀಡದೇ ರಸ್ತೆ ಗುಂಡಿ ಮುಚ್ಚಿ ಎಂದರೆ ಹೇಗೆ ಮುಚ್ಚಲು ಸಾಧ್ಯ?

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ನಗರ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂದು ಮಾಹಿತಿ ನೀಡಲಿ. ಬೆಂಗಳೂರು ನಗರ ರಸ್ತೆಗುಂಡಿ ಮುಕ್ತ ನಗರವಾಗಬೇಕು ಎಂಬುದು ನಮ್ಮ ಆಗ್ರಹ. ಬೆಂಗಳೂರು ರಸ್ತೆ ಗುಂಡಿ ಮುಚ್ಚಿ ತಾತಾ ಎಂದು ಪುಟ್ಟ ಬಾಲಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೂ ಈ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ.

ಗುತ್ತಿಗೆದಾರರ ವೈಫಲ್ಯದಿಂದ ಈ ಪರಿಸ್ಥಿತಿ ಬಂದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಸರ್ಕಾರ ಇದ್ದಾಗ ಇದ್ದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈಗಲೂ ಇದ್ದಾರೆ. ಆಡಳಿತ ನಡೆಸುವರರು ಕೆಲಸ ಹೇಗೆ ಮಾಡಿಸಿಕೊಳ್ಳುತ್ತಾರೆ ಎಂಬುದು ಮುಖ್ಯ. ಬಿಬಿಎಂಪಿ ಗ್ರ್ಯಾಂಟ್ಸ್ ನಲ್ಲಿ ಗುತ್ತಿಗೆದಾರರು ಕೆಲಸ ಮಾಡಿದರೆ ಮೂರು ವರ್ಷಗಳ ನಂತರ ಬಿಲ್ ಪಾಸ್ ಮಾಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಸೀನಿಯಾರಿಟಿ ಮೇಲೆ ಬೇಗನೆ ಬಿಲ್ ಕ್ಲಿಯರ್ ಆಗುತ್ತಿತ್ತು. ದೇಶದ ಎಲ್ಲ ರಾಜ್ಯಗಳಿಂದ ಐಎಎಸ್ ಅಧಿಕಾರಿಗಳು ಇರುತ್ತಾರೆ. ಅವರಿಂದ ಕೆಲಸ ಮಾಡಬೇಕಾಗಿರುವುದು ಸರ್ಕಾರದ್ದಾಗಿದೆ. ಬೆಂಗಳೂರಿನ 7 ಜನ ಮಂತ್ರಿಗಳಾಗಿದ್ದು ಅವರು ಏನು ಮಾಡುತ್ತಿದ್ದಾರೆ?’ ಎಂದು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!