ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಸಂಪುಟದಲ್ಲಿ ತಮಗೆ ನಿರೀಕ್ಷಿತ ಖಾತೆ ಸಿಗದಿರುವುದು ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಸಂಪುಟ ವಿಸ್ತರಣೆಯ ಬಳಿಕ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ಜವಾಬ್ದಾರಿ ನೀಡಲಾಗಿತ್ತು. ಆದರೆ ಅವರು ಆರಂಭದಿಂದಲೇ ನಗರಾಭಿವೃದ್ಧಿ ಖಾತೆ ನೀಡುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಕೊನೆಯ ಕ್ಷಣದವರೆಗೂ ಖಾತೆ ಬದಲಾವಣೆಯ ನಿರೀಕ್ಷೆಯಲ್ಲಿದ್ದ ಅವರು, ತಮ್ಮ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿರುವ ಮಾಹಿತಿ ತಮ್ಮ ಗಮನಕ್ಕೆ ಬಂದಿರುವುದಾಗಿ ಹೇಳಿದರು.ಅವರು ಜಲಸಂಪನ್ಮೂಲ ಇಲಾಖೆಯ ಬದಲು ಬೇರೆ ಖಾತೆಯನ್ನು ಬಯಸಿದ್ದಾರೆ. ಈ ವಿಷಯದ ಬಗ್ಗೆ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇನೆ ಎಂದು ಸಿಎಂ ತಿಳಿಸಿದರು.
ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಆತ್ಮೀಯ ಸ್ನೇಹಿತರಲ್ಲೊಬ್ಬರು ಎಂದು ಹೇಳಿದ ಡಿ.ಕೆ. ಶಿವಕುಮಾರ್, ಯಾವುದೇ ಗೊಂದಲ ಉಂಟಾಗದಂತೆ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








