ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೆಲ ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ಸಚಿವರ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಮ್ಮ ಇಚ್ಛೆಯ ಖಾತೆ ದೊರೆಯದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಸಚಿವ ರಾಮಲಿಂಗಾ ರೆಡ್ಡಿ ಇದೀಗ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.
ಸಚಿವ ಸಂಪುಟ ರಚನೆಯ ಆರಂಭದಲ್ಲೇ ಉಂಟಾಗಿದ್ದ ಈ ಅಸಮಾಧಾನವನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸತತ ಪ್ರಯತ್ನ ನಡೆಸಿತ್ತು. ಪಕ್ಷದ ಹಿರಿಯ ನಾಯಕರ ಮನವೊಲಿಕೆ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಇರುವ ದೀರ್ಘಕಾಲದ ರಾಜಕೀಯ ಸ್ನೇಹದ ಹಿನ್ನೆಲೆ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ.
ಪ್ರಸ್ತುತ ಅವರಿಗೆ ನೀಡಲಾಗಿರುವ ಜಲಸಂಪನ್ಮೂಲ ಇಲಾಖೆ ಜೊತೆಗೆ ಮತ್ತೊಂದು ಹೆಚ್ಚುವರಿ ಖಾತೆ ನೀಡುವ ಪ್ರಸ್ತಾವನೆ ಮಾಡಲಾಗಿದೆ. ವಸತಿ, ಸಣ್ಣ ನೀರಾವರಿ ಅಥವಾ ಮುಜರಾಯಿ ಇಲಾಖೆಗಳ ಪೈಕಿ ತಮ್ಮ ಆಯ್ಕೆಯ ಒಂದನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನೀಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







