ಭೋವಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗದ ರಾಮಪ್ಪ ನೇರಲಗುಂಟೆ ಆಯ್ಕೆ

1 Min Read

ಬೆಂಗಳೂರು: ಈ ಮೊದಲು ಭೋವಿ ನಿಗಮದ ಅಧ್ಯಕ್ಷರಾಗಿದ್ದ ಎಸ್.ರವಿಕುಮಾರ್ ಅವರು ತಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ತಮ್ಮ ಸ್ಥಾನ ಕಳೆದುಕೊಂಡಿದ್ದರು. ರಾಜೀನಾಮೆಯನ್ನು ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ. ಚಿತ್ರದುರ್ಗದ

ರಾಮಪ್ಪ ಎಂ. ನೇರಲಗುಂಟೆ ಅವರನ್ನು ಭೋವಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶ ಹೊರಡಿಸುವುದಕ್ಕೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಕರ್ನಾಟಕ ಭೋವಿ ನಿಗಮಕ್ಕೆ ಎಂ.ರಾಮಪ್ಪ ನೇರಲಗುಂಟೆ
ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಉಳಿದಂತೆ ಕಾಂಪೋಸ್ಟ್ ಅಭಿವೃದ್ಧಿ ನಿಗಮಕ್ಕೆ ಎ.ಎನ್.ನಟರಾಜ್ ಗೌಡ, ಮೈಸೂರಿನಲ್ಲಿರುವ ಮೃಗಾಲಯ ಪ್ರಾಧಿಕಾರಕ್ಕೆ ಎನ್.ರಂಗಸ್ವಾಮಿ, ಹುಬ್ಬಳ್ಳಿಯಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಬಿ.ನಾಗೇಂದ್ರ ಕುಮಾರ್ ಅವರನ್ನು ನೇಮಿಸಿದ್ದು, ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ತುಂಬುತ್ತಿರುವ ಬೆನ್ನಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಹಲವು ಸರ್ಕಸ್‌ಗಳ ನಡುವೆ ಅಧ್ಯಕ್ಷರ ನೇಮಕ ಮಾಡಿ ಈಗಾಗಲೇ ಆದೇಶಿಸಿದೆ. ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಕ್ಕೆ ಎಐಸಿಸಿ ಅಂತಿಮಗೊಳಿಸಿದ್ದ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ಐದು ಸ್ಥಾನಗಳನ್ನು ಕೈಬಿಟ್ಟು 34 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನವನ್ನು ಫೈನಲ್‌ ಮಾಡಿದ್ದರು. ಇದೀಗ ಮತ್ತೆ ಮೂರು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ, ಸರ್ಕಾರ ಆದೇಶ ಹೊರಡಿಸಿದೆ. ಭೋವಿ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ. ರಾಮಪ್ಪ ನೇರಲಗುಂಟೆ ಅವರು ನೇಮಕವಾಗುದ್ದಾರೆ.

Share This Article
Enable Notifications OK No thanks