ಬೆಂಗಳೂರು: ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದಾಶಿವನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಹೇಶ್ ಕುಮಟಳ್ಳಿ ಜೊತೆ ಸೇರಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಊಟ ಮಾಡಲು ಮೂವರು ಸೇರಿದ್ವಿ ಅಷ್ಟೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಿಯಾಕ್ಟ್ ಮಾಡಿದ್ದಾರೆ.
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಸಭೆ ಮಾಡಿಲ್ಲ. ಬೆಳಗಾವಿಯಲ್ಲಿ ನಡೆದ ಸಭೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಒಳಿತಿಗಾಗಿ ಕೂಡಿರಬಹುದು. ಬೆಳಗಾವಿಯ ಸಭೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತಾಡ್ತೇನೆ. ಕ್ಷೇತ್ರ ಅಭಿವೃದ್ಧಿ ವಿಚಾರವಾಗಿ ನಾನು ಸಿಎಂ ಅವರನ್ನ ಭೇಟಿ ಮಾಡಿದ್ದೇನೆ.
ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳುವುದಿಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ದ. ಬಿಜೆಪಿ ವರಿಷ್ಟರು ಎಲ್ಲವನ್ನು ನೋಡ್ತಿರ್ತಾರೆ. ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಕೂಡ ಸಭೆ ಕರೆದಿದ್ದರು. ಆದ್ರೆ ಪ್ರೀತಿ ಇದ್ದ ಕಡೆ ನಾವೂ ಹೋಗ್ತೇವೆ ಎಂದಿದ್ದಾರೆ.