Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಂಕುಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಎಎಪಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,            ಮೊ : 98862 95817

ಸುದ್ದಿಒನ್,  ಚಿತ್ರದುರ್ಗ,ಜ.24 : ಸಹಕಾರಿ ಬ್ಯಾಂಕ್ ಗಳಿಗೆ 439 ಕೋಟಿ ರೂ.ಗಳನ್ನು ವಂಚನೆ ಮಾಡಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ವ್ಯಕ್ತಿಗಳು ಸಹಕಾರಿ ಬ್ಯಾಂಕ್‍ಗಳನ್ನು ತಮ ಹಿಡಿತದಲ್ಲಿಟ್ಟುಕೊಂಡು ತಮಗೆ ಮನ ಬಂದಂತೆ ಬಳಸಿಕೊಳ್ಳುತ್ತಿದ್ದಾರೆ. ಇದು ಸಾಕಷ್ಟು ಹಣ ದುರ್ಬಳಕೆಗೆ ನಿರ್ಭಿತವಾದ ದಾರಿಯಾಗಿದ್ದು, ರಾಜಕೀಯ ವ್ಯಕ್ತಿಗಳ ಹಿಡಿತದಿಂದ ತಪ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಶಾಸಕ ರಮೇಶ ಜಾರಕಿಹೊಳಿ ಸಹಕಾರಿ ಬ್ಯಾಂಕ್ ಗೆ 439 ಕೋಟಿ ರೂ ವಂಚನೆ ಮಾಡಿರುವುದರಿಂದ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸಹಕಾರಿ ಬ್ಯಾಂಕ್‍ಗಳು ರಾಜಕೀಯ ವ್ಯಕ್ತಿಗಳ ಕೈಗೆ ಸಿಕ್ಕು ನಷ್ಟವನ್ನು ಅನುಭವಿಸುತ್ತಿವೆ. ಅವರ ಹಿಡಿತದಿಂದ ತಪ್ಪಿಸಬೇಕಾಗಿದ್ದು, ಮೋಸ ಮಾಡುವಂತಹ ವ್ಯಕ್ತಿಗಳಿಗೆ ರಾಜಕೀಯ ಮಾನ್ಯತೆ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಆಗ್ರಹಿಸಿದರು.

ಸಂವಿಧಾನದ ಮೊದಲ ಆಶಯ ನಿಂತಿರುವುದು  ಮಹಾಭಾರತ, ರಾಮಾಯಣದ ಮೇಲೆ. ಇಂತಹ ಮಹಾನ್ ಗ್ರಂಥಗಳನ್ನು ನಂಬಿ ರಾಜಕೀಯ ಮಾಡುತ್ತಿರುವ ಬಿಜೆಪಿ ಪಕ್ಷದವರು, ತನ್ನ ಸಿದ್ದಾಂತಕ್ಕೆ ಬೆಲೆ ಕೊಡುವುದೇ ಆದರೆ ಮೋಸ ಮಾಡಿರುವ ವ್ಯಕ್ತಿಗಳಿಗೆ ಪಕ್ಷದಲ್ಲಿ ಮಾನ್ಯತೆ ಕೊಡಬಾರದು ಎಂದು ಒತ್ತಾಯಿಸಿದರು.

ಮಹಾತ್ಮ ಗಾಂಧಿಜೀ, ಅಂಬೇಡ್ಕರ್ ರವರ ರಾಮರಾಜ್ಯದ ಚಿಂತನೆ ಕಡೆಗೆ ನಾವುಗಳು ಸಾಗುತ್ತಿರುವ ಈ ಸಂದರ್ಭದಲ್ಲಿ ಲೂಟಿಕೋರರಿಂದ ದೇಶವನ್ನು ರಕ್ಷಣೆ ಮಾಡಬೇಕಾಗಿದ ಅವಶ್ಯಕತೆ ಹೆಚ್ಚಾಗಿದ್ದು ಎಲ್ಲಾರೂ ಈ ನಿಟ್ಟಿನಲ್ಲಿ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಂಟಿ ಕಾರ್ಯದರ್ಶಿ ರವಿಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ,  ತನ್ವೀರ್, ಲಿಂಗರಾಜು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment