ಬೆಳಗಾವಿ: ವಿಧಾನಸಭಾ ಚುನಾವಣೆಗೂ ಮುನ್ನ ರಮೇಶ್ ಜಾರಕಿಹೊಳಿ ಸಾಕಷ್ಟು ಕಸರತ್ತು ನಡೆಸಿದ್ದರು. ಮತ್ತೆ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಹಿಂದೆ ಮುಂದೆ ಸುಳಿದಾಡಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ, ಸೈಲೆಂಟ್ ಆಗಿದ್ದರು. ಆದ್ರೆ ಈಗ ಆಪ್ತರೊಟ್ಟಿಗರ ಸೇರಿಕೊಂಡು ಫುಲ್ ಆಕ್ಟೀವ್ ಆಗಿದ್ದಾರೆ.
ಲೋಕಸಭಾ ಚುನಾವಣೆ ಸನಿಹದಲ್ಲಿದೆ. ಹೀಗಾಗಿ ಎಲ್ಲಾ ಪಕ್ಷಗಳು ಆಕ್ಟೀವ್ ಆಗಿದ್ದಾರೆ. ಅದರಲ್ಲೂ ಬಿಜೆಪಿ ಸೋಲಿಸಲೇಬೇಕೆಂದು ವಿಪಕ್ಷಗಳೆಲ್ಲ ತಯಾರಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಲೋಕಸಭಾ ಚುನಾವಣಾ ತಯಾರಿಯಲ್ಲಿದ್ದಾರೆ ಎನ್ನಲಾಗಿದೆ.
ಬೆಳಗಾವಿಯ ಬಿಜೆಪಿ ನಾಯಕರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ, ಇದೀಗ ರಮೇಶ್ ಜಾರಕಿಹೊಳಿ ಕೂಡ ಹೈಕಮಾಂಡ್ ಭೇಟಿಗೆ ದೆಹಲಿಗೆ ಫ್ಲೈಟ್ ಹತ್ತಿದ್ದಾರೆ. ಆಪ್ತರೊಟ್ಟಿಗೆ ಹೋಗಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಸದ್ಯದ ರಾಜಕೀಯ ಅದರಲ್ಲೂ ಬೆಳಗಾವಿ ರಾಜಕೀಯದ ಬಗ್ಗೆ ಹೆಚ್ಚಿನ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ಸೋಲು ಕಂಡಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೇಗೆಲ್ಲಾ ಸ್ಟಾಟರ್ಜಿ ಮಾಡ್ತಾರೆ ಎಂಬ ಕುತೂಹಲವಿದೆ. ಈ ಬಾರಿಯೂ ಬೆಳಗಾವಿಯಲ್ಲಿ ನಾನಾ ನೀನಾ ಎಂಬ ಯುದ್ಧ ನಡೆದೇ ತೀರುತ್ತೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ಹೆಚ್ಚಿನ ಕಾಳಜಿಯನ್ನೇ ವಹಿಸಬೇಕಾಗಿದೆ.