Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಗೆ..? ಸಿದ್ದರಾಮಯ್ಯ ನಡುವೆ ಬಿಸಿ ಬಿಸಿ ಚರ್ಚೆಯಾಗಿದ್ದೇನು..?

---Advertisement---

ಬೆಂಗಳೂರು; ರಮೇಶ್ ಜಾರಕಿಹೊಳಿ ಅವರ ನಡೆ ಕಾಂಗ್ರೆಸ್ ಸೇರುತ್ತಾರಾ ಎಂಬ ಅನುಮಾನವನ್ನು ಹುಟ್ಟು ಹಾಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿಯೇ ಇದ್ದವರು ರಮೇಶ್ ಜಾರಕಿಹೊಳಿ. ಇದೀಗ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಹೀಗಾಗಿ ರೆಬೆಲ್ ಆದವರೆಲ್ಲ ಕೊಂಚ ಸೈಲೆಂಟ್ ಆಗಿದ್ದಾರೆ. ಆದರೆ ಆ ಸೈಲೆಂಟ್ ಬೂದಿ ಮುಚ್ಚಿದ ಕೆಂಡದಂತೆಯೇ ಸರಿ. ಇದೀಗ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿರೋದು ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಸಿದ್ದರಾಮಯ್ಯ ಹಾಗೂ ರಮೇಶ್ ಜಾರಕಿಹೊಳಿ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಅಲ್ಲಿಯೇ ಇದ್ದ ಕೆಲ ನಾಯಕರು ಸೇರಿದಂತೆ ರಮೇಶ್ ಜಾರಕಿಹೊಳಿ ಅವರು ಕೂಡ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಪ್ರಸ್ತಾಪವೂ ನಡೆದಿದೆ. ಅಲ್ಲಿಯೇ ಇದ್ದ ಜಮೀರ್ ಅಹ್ಮದ್ ಖಾನ್, ಸಾಹುಕಾರ ಎಂದು ಅಪ್ಪಿ ಮಾತನಾಡಿಸಿದ್ದಾರೆ.

ಮತ್ತೊಂದು ಕಡೆ ಮಾಜಿ ಶಾಸಕ ಫಿರೋಜ್ ಶೇಠ್ ಅವರು, ರಮೇಶ್ ನ ಕಾಂಗ್ರೆಸ್ ಗೆ ವಾಪಾಸ್ ಕರೆಸಿಕೊಳ್ಳಿ ಎಂದೇ ಹೇಳಿದ್ದಾರೆ. ಆಗ ಸಿಎಂ ಏನು ಮಾತಾಡದೆ ರಮೇಶ್ ಜಾರಕಿಹೊಳಿಯತ್ತ ನೋಡಿ ಕಣ್ಸನ್ನೆ ಮಾಡಿ, ಸುಮ್ಮನಾಗಿರುವ ದೃಶ್ಯ ಕಂಡು ಬಂದಿದೆ. ಬಳಿಕ ಆ ಕಾರ್ಯಕ್ರಮ ಮುಗಿಸಿಕೊಂಡು ಎಲ್ಲರೂ ಹೊರಟಿದ್ದಾರೆ. ಸದ್ಯ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಹಲವರ ಅಸಮಾಧಾನವಿದೆ. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗಿದ್ದವರೆಲ್ಲಾ ಈಗ ಸೈಲೆಂಟ್ ಆಗಿದ್ದಾರೆ. ಯತ್ನಾಳ್ ಮಾತ್ರ ಹೊರಗಿದ್ದರು ವೈಲೆಂಟ್ ಆಗಿಯೇ ಇದ್ದಾರೆ. ಪದೇ ಪದೇ ಯಡಿಯೂರಪ್ಪ ಫ್ಯಾಮಿಲಿ ಮೇಲೆ ಗರಂ ಆಗ್ತಾನೆ ಇರ್ತಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...